ಆಸ್ಕರ್ ಫರ್ನಾಂಡಿಸ್, ಪ್ರಧಾನಿ ಮೋದಿ 
ದೇಶ

ಕಾಂಗ್ರೆಸ್‌ ದಿಗ್ಗಜ ಆಸ್ಕರ್‌ ಫರ್ನಾಂಡಿಸ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಸಂತಾಪ

ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

80 ವರ್ಷ ವಯಸ್ಸಿನ ಆಸ್ಕರ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, "ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, "ಆಸ್ಕರ್ ಫೆರ್ನಾಂಡಿಸ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಇದು ನನಗೆ ವೈಯಕ್ತಿಕ ನಷ್ಟ. ಅವರು ಕಾಂಗ್ರೆಸ್ ಪಕ್ಷದಲ್ಲಿ ನಮ್ಮಂತಹ ಅನೇಕರಿಗೆ ಮಾರ್ಗದರ್ಶಕರಾಗಿದ್ದರು" ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಫರ್ನಾಂಡಿಸ್ ಪಕ್ಷದ ಅತ್ಯಂತ ನಿಷ್ಠಾವಂತ ಸೈನಿಕರಾಗಿದ್ದರು ಎಂದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, "ಕಾಂಗ್ರೆಸ್ ಪಕ್ಷದ ಅತ್ಯುತ್ತಮ, ನಿಷ್ಠಾವಂತ ಸೈನಿಕರಲ್ಲಿ ಫರ್ನಾಂಡಿಸ್‌ ಒಬ್ಬರಾಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಮುಕ್ತಾರ್ ಅಬ್ಬಾಸ್ ನಖ್ವಿ ಕೂಡ ಕಾಂಗ್ರೆಸ್ ದಿಗ್ಗಜರ ಸಾವಿಗೆ ಸಂತಾಪ ಸೂಚಿಸಿದ್ದಾರೆ. "ರಾಜ್ಯಸಭಾ ಸಂಸದ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಬೆಂಬಲಿಗರಿಗೆ ಸಂತಾಪ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ನಖ್ವಿ ತಮ್ಮ ಟ್ವೀಟ್‌ನಲ್ಲಿ, "ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮತ್ತು ಸರಳತೆಯ ಸಂಕೇತವಾಗಿರುವ ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳಿಗೆ ತುಂಬಲಾರದ ನಷ್ಟವಾಗಿದೆ" ಎಂದಿದ್ದಾರೆ.

ಭಾರತದ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಹಿರಿಯ ನಾಯಕ ಸೀತಾರಾಂ ಯೆಚೂರಿ ಕೂಡ ಆಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, "ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನಾವು ಒಂದು ದಶಕಕ್ಕೂ ಹೆಚ್ಚು ಕಾಲ ರಾಜ್ಯಸಭೆಯಲ್ಲಿ ಸಹೋದ್ಯೋಗಿಗಳಾಗಿದ್ದೆವು,ಸಂತಾಪಗಳು" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!