ಘಟನೆಯ ದೃಶ್ಯ 
ದೇಶ

3 ಹಸುಳೆ ಸೇರಿ 19 ಮಂದಿ ಬಲಿ ಪಡೆದಿದ್ದ ವಿಮಾನ ಅಪಘಾತಕ್ಕೆ ಮಬ್ಬು, ವಿಂಡ್ ಶೀಲ್ಡ್ ವೈಪರ್ ಕಾರಣ

ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು.

ನವದೆಹಲಿ: ಕಳೆದ ವರ್ಷ ಕೋಝಿಕ್ಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಿದ್ದ ವಿಮಾನ ಅಪಘಾತಕ್ಕೆ ಮುಂಭಾಗದ ಮಬ್ಬಾಗಿದ್ದ ವಿಂಡ್ ಶೀಲ್ಡ್ ಕಾರಣ ಎಂಬುದು ತನಿಖಾವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಮಾನ ಅಪಘಾತ ತನಿಖಾ ಸಂಸ್ಥೆ ಅಪಘಾತದ ತನಿಖಾ ವರದಿಯನ್ನು ಸಲ್ಲಿಸಿದೆ. 

ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಅವಘಡದಲ್ಲಿ ಒಟ್ಟು 19 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ 3 ಹಸುಳೆಗಳೂ ಸೇರಿದ್ದವು.

ಟೇಬಲ್ ಟಾಪ್ ವಿಮಾನ ನಿಲ್ದಾಣವಾದ ಕೋಝಿಕ್ಕೋಡ್ ಏರ್ ಪೋರ್ಟ್ ನಲ್ಲಿ ವಿಮಾನ ಇಳಿಸುವ ವೇಳೆ ನತದೃಷ್ಟ ವಿಮಾನದ ವಿಂಡ್ ಶೀಲ್ಡ್ ಮಬ್ಬಾಗಿತ್ತು. ಇದರಿಂದ ಚಾಲಕನಿಗೆ ಎದುರಿನ ದೃಶ್ಯ ಚೆನ್ನಾಗಿ ಕಾಣಿಸಿರಲಿಲ್ಲ ಎಂಬುದು ತನಿಖೆ ವೇಳೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್