ಎಂ.ಕೆ.ಸ್ಟಾಲಿನ್ 
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ ಮಂಡಿಸಿದ ಸಿಎಂ ಎಂ.ಕೆ.ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಅವರು ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ. 

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಅವರು ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ. 

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಭಾನುವಾರ ನೀಟ್ ಪರೀಕ್ಷೆ ಆರಂಭವಾಗುವುದಕ್ಕಿಂತ ಕೆಲವೇ ಗಂಟೆಗಳ ಮೊದಲು 20 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಯಿಂದ ಸಾವಿಗೀಡಾದ ಪ್ರಕರಣದ ಮರುದಿನವೇ ಈ ಮಸೂದೆ ಮಂಡನೆಯಾಗಿದೆ.

ವಿಧಾನಸಭೆಯಲ್ಲಿ ಮಾತನಾಡಿರುವ ಸ್ಟಾಲಿನ್ ಅವರು, ಇಂದು ನಾನು ನೀಟ್ ವಿರುದ್ಧ ನಿರ್ಣಯವನ್ನು ಮಂಡಿಸಿದ್ದೇನೆ. ನೀವು (ಎಐಎಡಿಎಂಕೆ) ಕೂಡ ಈ ನಿರ್ಣಯವನ್ನು ತಂದಿದ್ದೀರಿ. ಈ ನಿರ್ಣಯಕ್ಕೆ ತಮ್ಮ ಬೆಂಬಲವನ್ನು ವಿಸ್ತರಿಸಲು ನಾನು ವಿರೋಧ ಪಕ್ಷಗಳನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. 

ನಮ್ಮ ಈ ನಿರ್ಣಯವು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ, ಸಮಾನತೆ ಮತ್ತು ಸಮಾನ ಅವಕಾಶವನ್ನು ಎತ್ತಿಹಿಡಿಯುತ್ತದೆ, ಎಲ್ಲಾ ದುರ್ಬಲ ವಿದ್ಯಾರ್ಥಿ ಸಮುದಾಯಗಳನ್ನು ತಾರತಮ್ಯದಿಂದ ರಕ್ಷಿಸುತ್ತದೆ. ಅಲ್ಲದೆ, ಅವರನ್ನು ವೈದ್ಯಕೀಯ ಮತ್ತು ದಂತ ಶಿಕ್ಷಣದ ಮುಖ್ಯವಾಹಿನಿಗೆ ತರುತ್ತದೆ. ರಾಜ್ಯಾದ್ಯಂತ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿ ಸಾವಿಗೆ ಸಂತಾಪ ಸೂಚಿಸಿರುವ ಅವರು, ನೀಟ್‌ನ ವಿರುದ್ಧ ಕಾನೂನು ಸಮರವು ಈ ಮಸೂದೆಯಿಂದ ಆರಂಭವಾಗಿದೆ ಎಂದಿದ್ದಾರೆ. 

ಈ ನಡುವೆ ಮಸೂದೆ ಮಂಡನೆಯ ವೇಳೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ವಿಧಾನಸಭೆಯಿಂದ ಹೊರನಡೆದಿದೆ. ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ವಿದ್ಯಾರ್ಥಿಯ ಆತ್ಮಹತ್ಯೆ ಕುರಿತು ಚರ್ಚಿಸಲು ಅವಕಾಶವನ್ನು ಒದಗಿಸಿಲ್ಲ ಎಂದು ಹೇಳಿಕೊಂಡಿದ್ದಾರೆ. 

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ದೇಶಾದ್ಯಂತ 201 ಕ್ಕೂ ಹೆಚ್ಚು ನಗರಗಳಲ್ಲಿ ನೀಟ್ ಪರೀಕ್ಷೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಸ್ಟಾಲಿನ್ ಪ್ರತಿನಿಧಿಸುವ ದ್ರಾವಿಡ ಮುನ್ನೇಟ್ರ ಕಳಗಂ (ಡಿಎಂಕೆ), ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ಚುನಾವಣೆಗೂ ಮುನ್ನ ನೀಟ್ ಅನ್ನು ರದ್ದುಗೊಳಿಸುವ ಭರವಸೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT