ಜೆಪಿ ನಡ್ಡಾ 
ದೇಶ

ತ್ರಿವರ್ಣ ಧ್ವಜಕ್ಕೆ ಅಪಮಾನ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಜಾಫರ್‌ನಗರ (ಬಿಹಾರ): ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜದ ಮೇಲೆ ಅಧ್ಯಕ್ಷರು ಬಿಜೆಪಿ ಧ್ವಜವನ್ನು ಇಟ್ಟಿದ್ದು ಅವರು ತ್ರಿವರ್ಣ ಧ್ವಜಕ್ಕೆ ಮಾಡಿದ ಅಗೌರವ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಮುಜಾಫರ್‌ಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

'ಉದ್ದೇಶಪೂರ್ವಕವಾಗಿ ಬಿಜೆಪಿ ಇದನ್ನು ಮಾಡಿದೆ. ನಡ್ಡಾ ಅವರ ಈ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ" ಎಂದು ಅರ್ಜಿದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಇದಕ್ಕೆ ಸಂಬಂಧಪಟ್ಟ ಕೆಲ ಚಿತ್ರಗಳನ್ನು ಸಹ ಸಲ್ಲಿಸಿದ್ದಾರೆ. ಇನ್ನು ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಕುರಿತು ದಿನಾಂಕ ನಿಗದಿಪಡಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel