ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,404 ಹೊಸ ಸೋಂಕು ಪ್ರಕರಣ, 339 ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25 ಸಾವಿರದ 404 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25 ಸಾವಿರದ 404 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 32 ಲಕ್ಷದ 89 ಸಾವಿರದ 579ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 43 ಸಾವಿರದ 213ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 62 ಸಾವಿರದ 207 ಆಗಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 37 ಸಾವಿರದ 127 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 24 ಲಕ್ಷದ 84 ಸಾವಿರದ 159ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಇದುವರೆಗೆ 54 ಕೋಟಿಯ 44 ಲಕ್ಷ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ದೇಶಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 75 ಕೋಟಿಯ 22 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?