ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಜೆಪಿ-ಆರ್‌ಎಸ್‌ಎಸ್ 'ನಕಲಿ ಹಿಂದುಗಳು', ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ "ನಕಲಿ ಹಿಂದುಗಳು". ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ
Lingaraj Badiger
Updated On : 15 Sept 2021, 5:43 pm

ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ "ನಕಲಿ ಹಿಂದುಗಳು". ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಸಿದ್ಧಾಂತವು ಬಿಜೆಪಿ-ಆರ್‌ಎಸ್‌ಎಸ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದರು.

ಇದನ್ನು ಓದಿ: ಆರ್ ಎಸ್ಎಸ್, ಬಿಜೆಪಿ ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಯತ್ನಿಸುತ್ತಿದೆ: ರಾಹುಲ್ ಗಾಂಧಿ​

Advertisement

Advertisement

ಲಕ್ಷ್ಮಿ ದೇವಿಯು ಒಬ್ಬರ ಗುರಿ ಸಾಧಿಸಲು ಸಹಾಯ ಮಾಡುತ್ತಾರೆ. ದುರ್ಗಾ ದೇವಿಯು ರಕ್ಷಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.

"ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ" ಎಂದು ರಾಹುಲ್ ಗಾಂಧಿ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement