ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ರಾಮಘರ್: ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ,  ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮತ್ತು ಟೀನೇಜ್ ಹುಡುಗ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ಪಾಟ್ನಾದವರಾಗಿದ್ದು, ಪೊಲೀಸರು ಅವರ ವಿಳಾಸ ಮತ್ತು ಇತರ ವಿವರಗಳನ್ನು ಪತ್ತೆ ಮಾಡುತ್ತಿದ್ದಾರೆ. ಘಟನೆಗೆ ಪೊಲೀಸರು ಕಾರಣ ಪತ್ತೆ ಹಚ್ಚುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್