ದೇಶ

ಜಮ್ಮು ಮತ್ತು ಕಾಶ್ಮೀರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಉಗ್ರನ ಬಂಧನ

Lingaraj Badiger

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ 12 ವರ್ಷಗಳ ಸುದೀರ್ಘ ಶೋಧದ ನಂತರ ಮಾಜಿ ಉಗ್ರನನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಮಾಜಿ ಉಗ್ರ ಬುಧಾರ್-ಬೊಜ್ವಾ ನಿವಾಸಿ ನಜೀರ್ ಅಹ್ಮದ್ ವಿರುದ್ಧ 2009 ರಲ್ಲಿ ಕಿಶ್ತವಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

"ವಿಶ್ವಾಸಾರ್ಹ ಮೂಲಗಳಿಂದ ಪಡೆದ ನಿರ್ದಿಷ್ಟ ಮಾಹಿತಿಯ ಮೇರೆಗೆ ಮಾಜಿ ಉಗ್ರನ ಬಂಧನಕ್ಕೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಆ ತಂಡ ಶಂಕಿತ ಸ್ಥಳಗಳ ಮೇಲೆ ದಾಳಿ ಮಾಡಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಹ್ಮದ್ ನನ್ನು ಬಂಧಿಸಿದೆ" ಎಂದು ಅವರು ಹೇಳಿದ್ದಾರೆ.

ಕಿಶ್ತವಾರ್ ಸೆಷನ್ಸ್ ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಉಗ್ರನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT