ಸಂಗ್ರಹ ಚಿತ್ರ 
ದೇಶ

ದೇಶದಾದ್ಯಂತ 75.89 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 61.15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 75.89 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 61.15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 75.89 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 30.62 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.70 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,176 ಹೊಸ ಕೇಸ್ ಪತ್ತೆಯಾಗಿದ್ದು 284 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 74.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ 
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 74.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧ ವಾರ ಹೇಳಿದೆ. 

ಈವರೆಗೆ ಕೇಂದ್ರವು ರಾಜ್ಯಗಳಿಗೆ 74.25 (74,25,94,875) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 4.62 (4,62,75,955) ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll: ಕ್ಷಣಕ್ಕೊಂದು ತಿರುವು; ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Video

GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?

ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು, ಪೋಷಕರ ಪ್ರತಿಭಟನೆ!