ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಸೆ. 30ರ ವರೆಗೆ ವಿಸ್ತರಣೆ, ನೈಟ್ ಕರ್ಫ್ಯೂ ಸಹ ಮುಂದುವರಿಕೆ

ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. 

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. 

ಅಧಿಕೃತ ಅಧಿಸೂಚನೆ ಪ್ರಕಾರ, "ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಮತ್ತು ಆರೋಗ್ಯ ಮತ್ತು ನೈರ್ಮಲ್ಯ ಪ್ರೋಟೋಕಾಲ್‌ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು" ಎಂದು ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಆದೇಶದಂತೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಅರ್ಧದಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿದೆ.

"ಆರೋಗ್ಯ ಸೇವೆಗಳು, ಕಾನೂನು ಮತ್ತು ಸುವ್ಯವಸ್ಥೆ, ಕೃಷಿ ಉತ್ಪನ್ನಗಳು ಮತ್ತು ಇತರ ತುರ್ತು ಸೇವೆಗಳು ಸೇರಿದಂತೆ ಅಗತ್ಯ ಸೇವೆ ಹೊರತುಪಡಿಸಿ ಜನರು ಮತ್ತು ವಾಹನಗಳ ಸಂಚಾರ ಸೇರಿದಂತೆ ಎಲ್ಲಾ ಹೊರಾಂಗಣ ಚಟುವಟಿಕೆಗಳನ್ನು ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾಡಳಿತಗಳು, ಪೊಲೀಸ್ ಆಯುಕ್ತರು ಮತ್ತು ಸ್ಥಳೀಯ ಅಧಿಕಾರಿಗಳು ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ? ಲೀಟರ್‌ ಹಾಲಿಗೆ ₹8 ಏರಿಕೆಗೆ ಒಕ್ಕೂಟಗಳ ಪ್ರಸ್ತಾವನೆ!

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!

ಪ್ರಾಣಿ ಪ್ರಿಯರಿಗೆ ಸಿಹಿಸುದ್ದಿ: ಕುನೋದಲ್ಲಿ ಚೀತಾ ಸಂತಾನ ಅಭಿವೃದ್ಧಿ, ಭಾರತದಲ್ಲೇ ಹುಟ್ಟಿದ KGP12ಗೆ ನಾಲ್ಕು ಮರಿಗಳ ಜನನ! Video