ಅರ್ಪಿತಾ ಘೋಷ್ 
ದೇಶ

ರಾಜ್ಯಸಭೆಗೆ ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ರಾಜೀನಾಮೆ!

ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.

ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ ಎಂದು ರಾಜ್ಯಸಭೆಯ ಸಚಿವಾಲಯ ತಿಳಿಸಿದೆ.

ಅರ್ಪಿತಾ ಅವರು ರಾಜೀನಾಮೆ ನೀಡಿರುವುದು ಟಿಎಂಸಿ ಮುಖಂಡರಿಗೂ ಅಚ್ಚರಿ ಮೂಡಿಸಿದೆ. ಅರ್ಪಿತಾ ಅವರ ಕಾರ್ಯವೈಖರಿ ಬಗ್ಗೆ ಪಕ್ಷಕ್ಕೆ ತೃಪ್ತಿ ಇರಲಿಲ್ಲ. ಹೀಗಾಗಿ, ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಲುರ್ಘಾಟ್‌ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ, ಅರ್ಪಿತಾ ಅವರನ್ನು 2020ರ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ನಾಮನಿರ್ದೇಶನ ಮಾಡಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!