ಸಾಂದರ್ಭಿಕ ಚಿತ್ರ 
ದೇಶ

ಚಾರ್ಧಾಮ್ ಯಾತ್ರೆಗೆ ಉತ್ತರಾಖಂಡ ಹೈಕೋರ್ಟ್ ಅಸ್ತು, ಆದ್ರೆ ದೈನಂದಿನ ಭಕ್ತರ ಸಂಖ್ಯೆಗೆ ಮಿತಿ

ಉತ್ತರಾಖಂಡ ಹೈಕೋರ್ಟ್ ಗುರುವಾರ ಚಾರ್ಧಾಮ್ ಯಾತ್ರೆಯ ಮೇಲಿನ ತನ್ನ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ...

ನೈನಿತಾಲ್: ಉತ್ತರಾಖಂಡ ಹೈಕೋರ್ಟ್ ಗುರುವಾರ ಚಾರ್ಧಾಮ್ ಯಾತ್ರೆಯ ಮೇಲಿನ ತನ್ನ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಯಾತ್ರೆ ನಡೆಸಬಹುದು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಯಾತ್ರೆಯ ಮೇಲಿನ ನಿಷೇಧವನ್ನು ತೆರವುಗೊಳಿಸಿದ ಮುಖ್ಯ ನ್ಯಾಯಮೂರ್ತಿ ಆರ್ ಎಸ್ ಚೌಹಾಣ್ ಮತ್ತು ನ್ಯಾಯಮೂರ್ತಿ ಅಲೋಕ್ ಕುಮಾರ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ, ದೇವಾಲಯಗಳಿಗೆ ಭೇಟಿ ನೀಡುವ ದೈನಂದಿನ ಭಕ್ತರ ಸಂಖ್ಯೆಗೆ ಮಿತಿ ಇರಬೇಕು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಹೇಳಿದೆ.

ಯಾತ್ರೆಗೆ ಬರುವ ಭಕ್ತರು ಕೋವಿಡ್ ನೆಗಟಿವ್ ವರದಿ ಮತ್ತು ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರ ಹೊಂದುವುದು ಕಡ್ಡಾಯ ಎಂದು ನ್ಯಾಯಾಲಯ ಹೇಳಿದೆ.

ಚಾರ್ಧಮ್ ಎಂದು ಕರೆಯಲ್ಪಡುವ ಪ್ರಸಿದ್ಧ ಹಿಮಾಲಯನ್ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ದೈನಂದಿನ ಸಂಖ್ಯೆಗೆ ಮಿತಿ ವಿಧಿಸಿರುವ ಹೈಕೋರ್ಟ್ ಕೇದಾರನಾಥ ಧಾಮದಲ್ಲಿ 800, ಬದರಿನಾಥ ಧಾಮದಲ್ಲಿ 1200, ಗಂಗೋತ್ರಿಯಲ್ಲಿ 600 ಮತ್ತು ಯಮುನೋತ್ರಿಯಲ್ಲಿ 400 ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಯಾತ್ರಾರ್ಥಿಗಳು ದೇವಾಲಯಗಳ ಸುತ್ತಲಿನ ಯಾವುದೇ ಕೊಳದಲ್ಲಿ ಸ್ನಾನ ಮಾಡಲು ಅನುಮತಿಸಲಾಗುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT