ಸೋನಿಯಾ ಗಾಂಧಿ 
ದೇಶ

ಉತ್ತರ ಪ್ರದೇಶ ಚುನಾವಣೆ: ಪಕ್ಷದ ಸ್ಕ್ರೀನಿಂಗ್ ಕಮಿಟಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಮುಂದಿನ ವರ್ಷ 2022ರ ಉತ್ತರ ಪ್ರದೇಶ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಚುನಾವಣೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ.

ಲಕ್ನೊ: ಮುಂದಿನ ವರ್ಷ 2022ರ ಉತ್ತರ ಪ್ರದೇಶ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಚುನಾವಣೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ.

ಈ ಸಂದರ್ಭದಲ್ಲಿ ಸ್ಕ್ರೀನಿಂಗ್ ಕಮಿಟಿಯನ್ನು ರಚಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಸಮಿತಿಯಲ್ಲಿ ಮೂವರು ಸದಸ್ಯರು ಮತ್ತು ಮೂವರು ಪದನಿಮಿತ್ತ ಸದಸ್ಯರಿದ್ದಾರೆ. ಜಿತೇಂದ್ರ ಸಿಂಗ್ ಅವರನ್ನು ಅಧ್ಯಕ್ಷರಾಗಿ, ದೀಪೇಂದರ್ ಹೂಡ ಮತ್ತು ವೈಶಾಲಿ ಗಾಯಕ್ ವಾಡ್ ಅವರನ್ನು ಸದಸ್ಯರನ್ನಾಗಿ ಆರಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು, ಸಿಎಲ್ ಪಿ ನಾಯಕ ಆರಾಧನ ಮಿಶ್ರ ಮೊನ ಮತ್ತು ಉತ್ತರ ಪ್ರದೇಶದ ಎಲ್ಲಾ ಎಐಸಿಸಿ ಕಾರ್ಯದರ್ಶಿಗಳು ಪದನಿಮಿತ್ತ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್