ಪ್ರಧಾನಿ ಮೋದಿ 
ದೇಶ

ಮೂಲಭೂತವಾದ, ಉಗ್ರವಾದದ ವಿರುದ್ಧ ಹೋರಾಡುವಂತೆ ಎಸ್‌ಸಿಒಗೆ ಪ್ರಧಾನಿ ಮೋದಿ ಕರೆ

ಹೆಚ್ಚುತ್ತಿರುವ ಮೂಲಭೂತವಾದ ಮತ್ತು ಉಗ್ರವಾದವು ಪ್ರಾದೇಶಿಕ ಶಾಂತಿ ಮತ್ತು ಸುರಕ್ಷತೆಗೆ ದೊಡ್ಡ ಸವಾಲಾಗಿದ್ದು, ಇದರ ವಿರುದ್ಧ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶಾಂಘೈ ಸಹಕಾರ ಸಂಘಟನೆ...

ನವದೆಹಲಿ: ಹೆಚ್ಚುತ್ತಿರುವ ಮೂಲಭೂತವಾದ ಮತ್ತು ಉಗ್ರವಾದವು ಪ್ರಾದೇಶಿಕ ಶಾಂತಿ ಮತ್ತು ಸುರಕ್ಷತೆಗೆ ದೊಡ್ಡ ಸವಾಲಾಗಿದ್ದು, ಇದರ ವಿರುದ್ಧ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಶಾಂಘೈ ಸಹಕಾರ ಸಂಘಟನೆ(ಎಸ್ ಸಿಒ)ಗೆ ಕರೆ ನೀಡಿದ್ದಾರೆ.

21ನೇ ಎಸ್ ಸಿಒ ವಾರ್ಷಿಕ ಶೃಂಗಸಭೆ ತಜಕಿಸ್ತಾನದ ದುಶಾಂಬೆಯಲ್ಲಿ ನಡೆಯುತ್ತಿದ್ದು, ವರ್ಚುವಲ್ ಮೂಲಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಾದೇಶಿಕ ಸಮಸ್ಯೆಗಳ "ಮೂಲ ಕಾರಣ" ಮೂಲಭೂತವಾದ. ಅಫಘಾನಿಸ್ತಾನದ ಇತ್ತೀಚೆಗಿನ ಬೆಳವಣಿಗೆಗಳು ಇದನ್ನು ಪುಷ್ಠಿಕರಿಸುತ್ತದೆ ಎಂದು ಹೇಳಿದರು.

"ಈ ಪ್ರದೇಶದ ದೊಡ್ಡ ಸವಾಲುಗಳು ಎಂದರೆ ಶಾಂತಿ, ಭದ್ರತೆ ಮತ್ತು ವಿಶ್ವಾಸದ ಕೊರತೆ ಎಂದು ನಾನು ನಂಬುತ್ತೇನೆ. ಈ ಸಮಸ್ಯೆಗಳ ಮೂಲ ಕಾರಣ ಹೆಚ್ಚುತ್ತಿರುವ ಮೂಲಭೂತವಾದ. ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳು ಈ ಸವಾಲನ್ನು ಹೆಚ್ಚು ಸ್ಪಷ್ಟಪಡಿಸಿದೆ" ಎಂದು ಪ್ರಧಾನಿ ಹೇಳಿದರು.

ಎಸ್‌ಸಿಒ ಮೂಲಭೂತವಾದ ಮತ್ತು ಉಗ್ರವಾದದ ವಿರುದ್ಧ ಹೋರಾಡಲು ಒಂದು ವೇದಿಕೆಯನ್ನು ಸಿದ್ಧಪಡಿಸಬೇಕು. ಎಸ್‌ಸಿಒ ಇಸ್ಲಾಮ್‌ಗೆ ಸಂಬಂಧಿಸಿದ ಮಧ್ಯಮ, ಸಹಿಷ್ಣು ಮತ್ತು ಅಂತರ್ಗತ ಸಂಸ್ಥೆಗಳು, ಸಂಪ್ರದಾಯಗಳ ನಡುವೆ ಬಲವಾದ ಜಾಲವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡಬೇಕು ಎಂದು ಮೋದಿ ಹೇಳಿದರು.

ನಮ್ಮ ಯುವಜನರಲ್ಲಿ  ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ಅಗತ್ಯವಿದೆಯೆಂದು ಅಭಿಪ್ರಾಯಪಟ್ಟ ಪ್ರಧಾನಿ ಮೋದಿ, ಸ್ಟಾರ್ಟ್‌ಅಪ್‌ ಮತ್ತು ಉದ್ಯಮಶೀಲತೆಯನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ  ಹೊಸ-ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ತನ್ನದೇ ಕೊಡುಗೆ ನೀಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮಧ್ಯ- ಏಷ್ಯಾದಲ್ಲಿ ಸಂಪರ್ಕವನ್ನು ಬಲಪಡಿಸಲು ಭಾರತವು ಬದ್ಧವಾಗಿದೆ. ಭಾರತದಲ್ಲಿ ಲಭ್ಯವಿರುವ ಮಾರುಕಟ್ಟೆಯನ್ನು ಬಳಸಿ ಇತರ ದೇಶಗಳು ಪ್ರಯೋಜನ ಪಡೆಯಬಹುದು ಎಂದು ಪ್ರಧಾನಿ ಮೋದಿ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT