ದೇಶ

71ನೇ ವಸಂತಕ್ಕೆ ಕಾಲಿರಿಸಿದ ಪ್ರಧಾನಿ ಮೋದಿ: ರಾಷ್ಟ್ರಪತಿ ಕೋವಿಂದ್, ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯರಿಂದ ಶುಭಾಶಯ

Manjula VN

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶುಭಾಶಯ ಕೋರಿರುವ ರಾಮನಾಥ್ ಕೋವಿಂದ್ ಅವರು, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ನಾನು ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ನಿಮ್ಮಲ್ಲಿರುವ ಸೇವಾ ಮನೋಭಾವದಿಂದ ರಾಷ್ಟ್ರ ಸೇವೆಯನ್ನು ಮುಂದುವರೆಸಿ ಎಂದು ಹೇಳಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಅಸಾಧಾರಣ ದೃಷ್ಟಿಕೋನ, ಅನುಕರಣೀಯ ನಾಯಕತ್ವ ಮತ್ತು ಸಮರ್ಪಿತ ಸೇವೆಯು ರಾಷ್ಟ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ. ದೇವರು ಅವರಿಗೆ ಆರೋಗ್ಯ, ಆಯಸ್ಸು, ಸಂತೋಷವನ್ನು ನೀಡಲಿ ಎಂದು ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಸೆಪ್ಟೆಂಬರ್ 17, 1950 ರಂದು ಗುಜರಾತಿನ ಒಂದು ಸಣ್ಣ ಪಟ್ಟಣದಲ್ಲಿ ಜನಿಸಿದರು. ಬಡ ಕುಟುಂಬದಲ್ಲಿ ಜನಿಸಿದ ಅವರು ಆರಂಭದಲ್ಲಿ ಸಂಕಷ್ಟಗಳನ್ನು ಎದುರಿಸಿದರು. ಬಳಿಕ ಸಂಘಪರಿವಾರಕ್ಕೆ ಸೇರಿ ನಿರಂತರ ಹೋರಾಟಗಳ ಮೂಲಕ ರಾಜಕೀಯಕ್ಕೆ  ಪಾದಾರ್ಪಣೆ ಮಾಡಿದರು. 

ಮೋದಿಯವರ ಜನ್ಮ ದಿನವನ್ನು ಐತಿಹಾಸಿಕ ದಿನವನ್ನಾಗಿಸಲು ಬಿಜೆಪಿ ಇಂದಿನಿಂದ 21 ದಿನಗಳ ಕಾಲ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ಆರಂಭಿಸುತ್ತಿದೆ.

SCROLL FOR NEXT