ಸಾಂದರ್ಭಿಕ ಚಿತ್ರ 
ದೇಶ

ಮ್ಯಾಟ್ರಿಮೋನಿಯಲ್ ತಾಣದಲ್ಲಿ ಸಿಕ್ಕ ಹುಡುಗನಿಗಾಗಿ 12 ಲಕ್ಷ ರೂ. ಲೋನ್ ಮಾಡಿ ಮೋಸ ಹೋದ ಯುವತಿ

ವಂಚಕ ಮ್ಯಾಟ್ರಿಮೋನಿಯಲ್ ತಾಣದಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿದ್ದ. ಆತನೇ ಓರ್ವ ಹುಡುಗಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಯುವತಿಯ ಬಳಿ ತಾನು ಅಮೆರಿಕದಲ್ಲಿ ಸಾಫ್ಟ್ ವೇರ್ ಉದ್ಯೋಗಿಯೆಂದು ಪರಿಚಯಿಸಿಕೊಂಡಿದ್ದ. 

ವಿಜಯವಾಡ: ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪರಿಚಯವಾದ ವಂಚಕನೋರ್ವ ಯುವತಿಯನ್ನು ನಂಬಿಸಿ ಹಣ ಪಡೆದು ಮೋಸ ಮಾಡಿರುವ ಘಟನೆ ಆಂದ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. 

ವಂಚಕ ಮ್ಯಾಟ್ರಿಮೋನಿಯಲ್ ತಾಣದಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿದ್ದ. ಆತನೇ ಓರ್ವ ಹುಡುಗಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಯುವತಿಯ ಬಳಿ ತಾನು ಅಮೆರಿಕದಲ್ಲಿ ಸಾಫ್ಟ್ ವೇರ್ ಉದ್ಯೋಗಿಯೆಂದು ಪರಿಚಯಿಸಿಕೊಂಡಿದ್ದ. 

ಕೆಲ ದಿನಗಳ ತರುವಾಯ ತಾನು ಅಮೆರಿಕದಿಂದ ಭಾರತಕ್ಕೆ ಮರಳಲು ಅರ್ಜೆಂಟಾಗಿ 12 ಲಕ್ಷ ರೂ. ಬೇಕು ಎಂದು ಯುವತಿ ಬೆಳಿ ಬೇಡಿಕೆ ಇಟ್ಟಿದ್ದ. ವಂಚಕನ ಬಲೆಗೆ ಬಿದ್ದಿದ್ದ ಯುವತಿ ಬ್ಯಾಂಕಿನಲ್ಲಿ 12 ಲಕ್ಷ ಲೋನ್ ಮಾಡಿ ಆ ಯುವಕನಿಗೆ ನೀಡಿದ್ದಳು. 

ಇದಾದ ನಂತರ ವಂಚಕ ಯುವತಿಯ ಕರೆಗಳನ್ನು ಸ್ವೀಕರಿಸುವುದನ್ನು ಬಂದ್ ಮಾಡಿದ. ಇದರಿಂದಾಗಿ ತಾನು ಮೋದ ಹೋಗಿರುವುದು ತಿಳಿದು ಯುವತಿ ಪೊಲೀಸ್ ದೂರು ನೀಡಿದ್ದಳು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು.

ಆತನ ಮೇಲೆ ಈ ಹಿಂದೆ 4 ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆದು ಯುವತಿಗೆ ಹಸ್ತಾಂತರ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!