ದೇಶ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗರಿ

Srinivasamurthy VN

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಕೃತಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ ಘೋಷಣೆಯಾಗಿತ್ತು. ಇಂದು ದೆಹಲಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಂ ವೀರಪ್ಪ ಮೊಯಿಲಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ ಕಂಬಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ.

ಮುಖ್ಯ ತೀರ್ಪುಗಾರರಾಗಿ ಇದ್ದ ಸಾಹಿತಿ ಅರವಿಂದ ಮಾಲಗತ್ತಿ, ಪದ್ಮಪ್ರಸಾದ್ ಹಾಗೂ ಎಸ್ ಜಿ ಸಿದ್ದರಾಮಯ್ಯ ನವರ ಸಮಿತಿ,2020ನೇ ಸಾಲಿನ  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ನುರಿತ ರಾಜಕಾರಣಿ, ಸಮರ್ಥ ಆಡಳಿತಗಾರರಾಗಿರುವಂತೆ ಮೊಯಿಲಿ ಕವಿ ಹೃದಯವನ್ನೂ ಹೊಂದಿದ್ದಾರೆ. ಅವರು ಸ್ವತಃ ಕವಿ ಮತ್ತು ಸಾಹಿತಿ. ಅವರು ಹಾಲುಜೇನು, ಮತ್ತೆ ನಡೆಯಲಿ ಸಮರ, ಯಕ್ಷಪ್ರಶ್ನೆ ಎಂಬ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. 

SCROLL FOR NEXT