ಸೋನಿಯಾ ಗಾಂಧಿ, ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

'ನನ್ನ ಕೈಲಾದಷ್ಟು ಮಾಡಿದ್ದೇನೆ, ಶೇ 89. 2 ರಷ್ಟು ಭರವಸೆ ಈಡೇರಿಸಿದ್ದೇನೆ'- ಸೋನಿಯಾಗೆ ಅಮರೀಂದರ್ ಸಿಂಗ್ ಪತ್ರ

ಪಂಜಾಬ್ ರಾಜ್ಯಪಾಲರಿಗೆ ಶನಿವಾರ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, ಕಳೆದ ಐದು ತಿಂಗಳ ರಾಜಕೀಯ ಘಟನೆಗಳಲ್ಲಿ  ಅನುಭವಿಸಿರುವ ಯಾತನೆಯನ್ನು ವ್ಯಕ್ತಪಡಿಸಿದ್ದಾರೆ.

ಚಂಡೀಘಡ: ಪಂಜಾಬ್ ರಾಜ್ಯಪಾಲರಿಗೆ ಶನಿವಾರ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, ಕಳೆದ ಐದು ತಿಂಗಳ ರಾಜಕೀಯ ಘಟನೆಗಳಲ್ಲಿ ಅನುಭವಿಸಿರುವ ರಾಜಕೀಯ ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಪಂಜಾಬ್‌ನ ರಾಷ್ಟ್ರೀಯ ಅವಶ್ಯಕತೆಗಳು ಮತ್ತು ಅದರ ಪ್ರಮುಖ ಕಾಳಜಿಗಳ ಸಂಪೂರ್ಣ ತಿಳುವಳಿಕೆಯನ್ನು ಆಧರಿಸಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಪಂಜಾಬ್ ಕಾಂಗ್ರೆಸ್ ಘಟಕದಲ್ಲಿನ ರಾಜಕೀಯ ವಿದ್ಯಮಾನಗಳಿಂದ  ಪಂಜಾಬ್ ನಲ್ಲಿ ಅಸ್ಥಿರತೆ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ನನ್ನ ವೈಯಕ್ತಿಕ ಯಾತನೆಯೊಂದಿಗೆ ರಾಜ್ಯದ ಅಭಿವೃದ್ಧಿ ಮತ್ತು ಶಾಂತಿಗೆ ಭಂಗ ತರುವುದಿಲ್ಲ ಎಂಬ ಭರವಸೆ ಇಟ್ಟುಕೊಂಡಿದ್ದೇನೆ. ಕಳೆದ ಕೆಲವು ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗಮನ ಕೇಂದ್ರೀಕರಿಸಿದ್ದಾಗಿ ಅವರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿ ತನ್ನ ಕೈಲಾದಷ್ಟು ಮತ್ತಿಗೆ ಉತ್ತಮ ರೀತಿಯಲ್ಲಿ ಜನರಿಗಾಗಿ ಕೆಲಸ ಮಾಡಿದ ತೃಪ್ತಿಯಿದೆ. ಅನೇಕ ಭೌಗೋಳಿಕ ರಾಜಕೀಯ ಮತ್ತಿತರ ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಯಾವುದರೊಂದಿಗೆ ರಾಜಿಯಿಲ್ಲದೆ ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದು, ಕೋಮುಸೌಹಾರ್ದತೆಯೊಂದಿಗೆ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಿರುವುದಾಗಿ ಅವರು ಹೇಳಿದ್ದಾರೆ.

ಕಳೆದ ನಾಲ್ಕುವರೆ ವರ್ಷಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದು, 2017ರ  ವಿಧಾನಸಭಾ ಚುನಾವಣೆಯಲ್ಲಿ ನೀಡಲಾಗಿದ್ದ ಭರವಸೆಗಳಲ್ಲಿ ಶೇ. 89. 2 ರಷ್ಟನ್ನು ಪೂರ್ಣಗೊಳಿಸಿದ್ದು, ಉಳಿದ ಭರವಸೆಗಳ ಕೆಲಸ ಪ್ರಗತಿಯಲ್ಲಿರುವುದಾಗಿ ಅವರು ತಿಳಿಸಿದ್ದಾರೆ. 

2015ರಲ್ಲಿ ನಡೆದಿದ್ದ ಸಿಖ್ ಗ್ರಂಥಗಳಿಗೆ ಅಪವಿತ್ರತೆ ಪ್ರಕರಣ ಮತ್ತು ನಂತರ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಸಂಬಂಧಿಸಿದ ತನಿಖೆಗಾಗಿ ನಿವೃತ್ತ ನ್ಯಾಯಾಧೀಶ ರಂಜಿತ್ ಸಿಂಗ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸಲಾಗಿದ್ದು, ಅದು ಆಗಸ್ಟ್ 16, 2018 ರಂದು ವರದಿ ನೀಡಿದ್ದು, ಸಂಪೂರ್ಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT