ಅಶೋಕ್ ಗೆಹ್ಲೋಟ್ 
ದೇಶ

ಅಮರೀಂದರ್ ಸಿಂಗ್ ಪಕ್ಷದ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ: ಅಶೋಕ್ ಗೆಹ್ಲೋಟ್

ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಹೇಳಿದ್ದಾರೆ. 

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಹಿತಾಸಕ್ತಿಗಳಿಗೆ ನೋವುಂಟು ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಹೇಳಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಅವರು, ಸೇನೆಯ ಮಾಜಿ ಕ್ಯಾಪ್ಟನ್‌, ಪಕ್ಷದ ಗೌರವಾನ್ವಿತ ಮುಖಂಡರು, ಮುಂದೆಯೂ ಕಾಂಗ್ರೆಸ್‌ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮುಂದುವರಿಯುವ ಭರವಸೆ ಇದೆ ಎಂದು ಹೇಳಿದ್ದಾರೆ. 

ಕ್ಯಾಪ್ಟನ್‌ ಸಾಹೇಬರೇ ಸ್ವತಃ ಹೇಳಿರುವಂತೆ, ಅವರಿಗೆ ಪಕ್ಷವು ಒಂಬತ್ತೂವರೆ ವರ್ಷಗಳು ಪ್ರಮುಖ ಹೊಣೆಗಾರಿಕೆಯನ್ನು ನೀಡಿದೆ ಹಾಗೂ ಪಂಜಾಬ್‌ನ ಜನತೆಗೆ ಸೇವೆ ಸಲ್ಲಿಸುವ ಕರ್ತವ್ಯವನ್ನು ಅವರು ಅತ್ಯಂತ ಪ್ರಾಮಾಣಿಕವಾಗಿ ಪೂರೈಸಿದ್ದಾರೆಂದು ತಿಳಿಸಿದ್ದಾರೆ. 

ಪಕ್ಷದ ಹೈಕಮಾಂಡ್ ಕೇವಲ ಶಾಸಕರು ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಹಾಗೂ ನಾಯಕರು ಪಕ್ಷದ ಹಿತದೃಷ್ಟಿಯಿಂದ ಯೋಚಿಸಬೇಕು ಎಂದಿದ್ದಾರೆ. 

ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಈಗ ಸೋನಿಯಾ ಗಾಂಧಿ ಅವರ ಅಂಗಳದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ