ಬಾಬುಲ್ ಸುಪ್ರಿಯೋ, ಮಮತಾ ಬ್ಯಾನರ್ಜಿ 
ದೇಶ

2024ರಲ್ಲಿ ಪ್ರಧಾನಿ ಹುದ್ದೆಗಾಗಿ ಮುಂಚೂಣಿಯಲ್ಲಿ ಮಮತಾ ಬ್ಯಾನರ್ಜಿ: ಬಾಬೂಲ್ ಸುಪ್ರಿಯೋ

2024ರಲ್ಲಿ ಪ್ರಧಾನ ಮಂತ್ರಿ ಹುದ್ದೆಗಾಗಿ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ.

ಕೊಲ್ಕತ್ತಾ: 2024ರಲ್ಲಿ ಪ್ರಧಾನ ಮಂತ್ರಿ ಹುದ್ದೆಗಾಗಿ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ.

2024ರಲ್ಲಿ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕು ಎಂದು ಬಯಸುತ್ತೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಧಾನ ಮಂತ್ರಿ ಹುದ್ದೆಗಾಗಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿರುವ ಸತ್ಯವನ್ನು ಯಾರೂ ಕೂಡಾ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಸುಪ್ರಿಯೋ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟಿಎಂಸಿಗೆ ಸೇರ್ಪಡೆ ಕುರಿತಂತೆ ಪ್ರತಿಕ್ರಿಯಿಸಿದ ಸುಪ್ರಿಯೋ, ಪಕ್ಷ ಬದಲಾಯಿಸುವ ಮೂಲಕ ನಾನು ಯಾವುದೇ ಇತಿಹಾಸ ನಿರ್ಮಿಸುವುದಿಲ್ಲ,ಬಿಜೆಪಿಯ ಹಿರಿಯ ನಾಯಕರೊಂದಿಗೆ ಭಿನ್ನಾಭಿಪ್ರಾಯವಿತ್ತು, ಬಿಜೆಪಿ ಪಕ್ಷ ಮೊದಲು ಅವರ ಅಸಮಾಧಾನವನ್ನು ಕೇಳಬೇಕು ಎಂದರು.

ಅಸನ್ಸೋಲ್ ಸಂಸದನಾಗಿ ಕೆಲಸವನ್ನು ನಿರ್ವಹಿಸುತ್ತೇನೆ, ಯಾವುದೇ ಇತರ ಪಕ್ಷವನ್ನು ಸೇರುವುದಿಲ್ಲ, ದೆಹಲಿಯಲ್ಲಿ ನೀಡಲಾಗಿದ್ದ ಬಂಗಲೆಯನ್ನು ಕೂಡಾ ತೆರವುಗೊಳಿಸಲಾಗಿದೆ. ಶೀಘ್ರದಲ್ಲಿಯೇ ಭದ್ರತಾ ಸಿಬ್ಬಂದಿಯನ್ನು ಅವರ ಕರ್ತವ್ಯದಿಂದ ಬಿಡುಗಡೆ ಮಾಡುವುದಾಗಿ ಸುಪ್ರಿಯೋ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT