ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೆ.22ಕ್ಕೆ ಪ್ರಧಾನಿ ಮೋದಿ ಅಮೆರಿಕಾ​ ಪ್ರವಾಸ: ಕಮಲಾ ಹ್ಯಾರಿಸ್​, ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್​ ಕುಕ್​ ಭೇಟಿ ಸಾಧ್ಯತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.22ಕ್ಕೆ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.

ಪ್ರಧಾನಿ ಮೋದಿ
Manjula VN
Updated On : 20 Sept 2021, 11:49 am

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.22ಕ್ಕೆ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ. 

ಸೆಪ್ಟೆಂಬರ್ 22 ರಂದು ವಾಷಿಂಗ್ಟನ್ ಡಿಸಿಗೆ ತೆರಳಲಿರುವ ಮೋದಿ ಸೆ.23ರಂದು ಬೆಳಿಗ್ಗೆ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಒಗಳನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. 

ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್ ಕುಕ್ ಜೊತೆ ಕೂಡ ಮೋದಿ ಸಭೆ ನಡೆಸಲಿದ್ದಾರೆ. ಆದರೆ, ಅವರ ಭೇಟಿಯ ವಿವರಗಳು ಇನ್ನೂ ದೃಢಪಟ್ಟಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

Advertisement

Advertisement

ಅಮೆರಿಕದ ಉನ್ನತ ಉದ್ಯಮಿಗಳ ಜೊತೆಗಿನ ಭೇಟಿಯ ನಂತರ, ಮೋದಿ ಅವರು ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ. 

ಭಾರತೀಯ ಮೂಲದ ಮಹಿಳೆ ಅಮೆರಿಕದಲ್ಲಿ ಮೊದಲ ಬಾರಿಗೆ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಜೊತೆ ಮಾತುಕತೆ ನಡೆಸಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಈ ವಿಚಾರದ ಬಗ್ಗೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ.

ಪ್ರಧಾನಿ ಮೋದಿಯವರು ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಮೊದಲ ಭೌತಿಕ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ 24 ರಂದು ವಾಷಿಂಗ್ಟನ್‌ನಲ್ಲಿ ನಡೆಯುವ ಮೊದಲ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಅದೇ ದಿನ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಕೌಂಟರ್ ಯೋಶಿಹೈಡ್ ಸುಗಾ ಅವರನ್ನು ಕೂಡ ಪ್ರಧಾನಿ ಭೇಟಿ ಮಾಡಲಿದ್ದಾರೆ.

ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ಭೋಜನವನ್ನು ಕೂಡ ಆಯೋಜಿಸಲಾಗಿದೆ. ಇನ್ನು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಭೇಟಿ ವಾಷಿಂಗ್ಟನ್​ಗೆ ಭೇಟಿ ನೀಡುವ ಸಾಧ್ಯತೆಯಿದೆ. ಸೆಪ್ಟೆಂಬರ್ 24 ರಂದು ಸಂಜೆ ಪ್ರಧಾನಿ ಮೋದಿ ನ್ಯೂಯಾರ್ಕ್‌ಗೆ ತೆರಳಲಿದ್ದು, ಮರುದಿನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments