ಪಂಜಾಬ್ ನೂತನ ಸಿಎಂ ಚನ್ನಿ 
ದೇಶ

ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ನವದೆಹಲಿ: ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ಈ ಕುರಿತಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಒತ್ತಾಯ ಹೇರಿದ್ದು, ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ರೇಖಾ ಶರ್ಮಾ, ‘2018 ರಲ್ಲಿ ಮೀಟೂ ಚಳವಳಿಯ ಸಮಯದಲ್ಲಿ ಚರಣಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ.  ಪಂಜಾಬ್‌ ರಾಜ್ಯ ಮಹಿಳಾ ಆಯೋಗವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಚನ್ನಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗದ ಆಧ್ಯಕ್ಷರು ಸ್ವತಃ ಧರಣಿ ಕುಳಿತಿದ್ದರು. ಆದರೆ ಏನೂ ಆಗಲಿಲ್ಲ, ಎಂದು ರೇಖಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

‘ಮಹಿಳೆಯೊಬ್ಬರ ನೇತೃತ್ವ ಇರುವ ಪಕ್ಷದಿಂದ ಚನ್ನಿ ಅವರನ್ನು ಪಂಜಾಬ್ ಸಿಎಂ ಮಾಡಲಾಗಿದೆ. ಇದು ನಿಜಕ್ಕೂ ಮಹಿಳೆಯರಿಗಾದ ದ್ರೋಹ. ಚನ್ನಿ ಅವರು ಮಹಿಳೆಯರ ಸುರಕ್ಷತೆಗೆ ಅಪಾಯಕಾರಿ.. ಆವರ ವಿರುದ್ಧ ತನಿಖೆ ನಡೆಸಬೇಕು. ಅವರು ಸಿಎಂ ಆಗಲು ಅರ್ಹರಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವಂತೆ ನಾನು ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸುತ್ತೇನೆ ಎಂದು ರೇಖಾ ಶರ್ಮಾ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘Indigo ವಿಮಾನ’ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ, ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ನಾನು ಯಾರಿಂದಲೂ ಲಂಚ ಪಡೆದಿಲ್ಲ, ಭ್ರಷ್ಟ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರು ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

SCROLL FOR NEXT