ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಪಾಲ್ಘರ್‌ನಲ್ಲಿ ಮಹಿಳೆಗೆ ಥಳಿಸಿದ ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 30 ವರ್ಷದ ಮಹಿಳೆಗೆ ದುಷ್ಟಶಕ್ತಿಗಳ ವಶದಿಂದ ಮುಕ್ತಗೊಳಿಸುವ ನೆಪದಲ್ಲಿ  ಥಳಿಸಿದ ಸ್ವಯಂ ಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ್ದಾರೆ. 

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 30 ವರ್ಷದ ಮಹಿಳೆಗೆ ದುಷ್ಟಶಕ್ತಿಗಳ ವಶದಿಂದ ಮುಕ್ತಗೊಳಿಸುವ ನೆಪದಲ್ಲಿ  ಥಳಿಸಿದ ಸ್ವಯಂ ಘೋಷಿತ ದೇವಮಾನವನನ್ನು ಪೊಲೀಸರು ಬಂಧಿಸಿದ್ದಾರೆ. 

ನರಬಲಿ ಮತ್ತು ಇತರ ಅಮಾನವೀಯ, ದುಷ್ಟಶಕ್ತಿ, ಅಘೋರಿ ಅಭ್ಯಾಸಗಳು ಮತ್ತು ಬ್ಲ್ಯಾಕ್ ಮ್ಯಾಜಿಕ್ ಕಾಯ್ದೆ 2013ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ವಸಾಯಿನನಲ್ಲ ಸೋಪಾರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅನಾರೋಗ್ಯದ ಹಿನ್ನಲೆಯಲ್ಲಿ ಆದಿವಾಸಿ ಪಡದ ಭಿರವನಾಥ ದೇವಸ್ಥಾನದ ಆರೋಪಿ 66 ವರ್ಷದ ಹೇಮರಾಜ್ ಅಂಬಲಾಲ್ ನಾಗ್ದಾ ಅವರನ್ನು ಮಹಿಳೆಯ ಪರ ಕುಟುಂಬಸ್ಥರು ಸಂಪರ್ಕಿಸಿದ್ದರು. 

ಆ ಮಹಿಳೆಗೆ ಕೆಲವು ದುಷ್ಟಶಕ್ತಿಗಳು ತೊಂದರೆ ಕೊಡುತ್ತೀವೆ ಎಂದು ಹೇಳಿದ ನಾಗ್ದಾ ಅವುಗಳನ್ನು ತೊಡೆದುಹಾಕಲು ಕೆಲವು ಆಚರಣೆಗಳನ್ನು ಮಾಡಬೇಕಿತ್ತು ಎಂದು ಅಧಿಕಾರಿ ಹೇಳಿದರು.

ಹೇಮರಾಬ್ ಸಂತ್ರಸ್ತೆ ಕೂದಲನ್ನು ಹಿಡಿದು ಥಳಿಸಿದ್ದಾನೆ. ಕೊನೆಗೆ ಥಳಿತ ತೀವ್ರ ಅಸಹನೀಯವಾಗಿದ್ದು ಅಲ್ಲದೆ ಆಕೆಯ ಸ್ಥಿತಿ ಹದಗೆಟ್ಟಿತು. ಇದರಿಂದಾಗಿ ಕೊನೆಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರು. 

ಎಫ್ಐಆರ್ ದಾಖಲಿಸಿಕೊಂಡ ನಂತರ ಭಾನುವಾರ ಆರೋಪಿಯನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT