ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದ ಉಧಂಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್‌ ಸಾವು

ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಪತನವಾಗಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಇಬ್ಬರು ಪೈಲಟ್‌ಗಳಾದ ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ ಅವರು ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಸೇನಾ ವಿಮಾನಯಾನ ದಳಕ್ಕೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಕಮಾಂಡರ್, ಉತ್ತರ ಕಮಾಂಡ್, ಲೆಫ್ಟಿನೆಂಟ್ ಜನರಲ್ ವೈ ಕೆ ಜೋಶಿ ಹುತಾತ್ಮ ಪೈಲಟ್ ಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್