ಪ್ರಧಾನಿ ಮೋದಿ 
ದೇಶ

ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಅಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಅಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆ. 24 ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇದು ಜೋ ಬೈಡೆನ್ ಅವರು ಜನವರಿ 20 ರಂದು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿಯಾಗಿದೆ.

ಕ್ವಾಡ್ ಸಭೆಯಲ್ಲಿ ಭಾಗವಹಿಸಲಿರುವ ಮೋದಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಪ್ರಧಾನಿಯವರು ಅಮೆರಿಕಾಗೆ ಭೇಟಿ ನೀಡುತ್ತಿರುವ ಸಮಯದಲ್ಲಿ, ಆ ದೇಶದ ಪರಿಸ್ಥಿತಿ ಮತ್ತು ಪ್ರದೇಶದ ಮೇಲಿನ ಅದರ ಪ್ರಭಾವ ಕುರಿತಾದ ಮಾತುಕತೆ ಕಾರ್ಯಸೂಚಿಯಲ್ಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.

ಮೋದಿ ಅವರು ಸೆಪ್ಟೆಂಬರ್ 24 ರಂದು ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಪ್ರಸ್ತುತ ಪ್ರಾದೇಶಿಕ ಭದ್ರತೆಯ ಪರಿಸ್ಥಿತಿಯ ಕುರಿತು ಉಭಯ ಮುಖಂಡರು ಚರ್ಚಿಸಲಿದ್ದಾರೆ. 

"ಮೂಲಭೂತವಾದ, ಉಗ್ರವಾದ, ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಜಾಗತಿಕ ಭಯೋತ್ಪಾದಕರ ಜಾಲವನ್ನು ಕಿತ್ತುಹಾಕುವ ಅಗತ್ಯವನ್ನು ಉಭಯ ಮುಖಂಡರೂ ಚರ್ಚಿಸಲಿದ್ದಾರೆ” ಎಂದು ಶೃಂಗ್ಲಾ ತಿಳಿಸಿದ್ದಾರೆ. 

ಸೆಪ್ಟೆಂಬರ್ 24 ರಂದು ಶ್ವೇತಭವನದಲ್ಲಿ ಕ್ವಾಡ್ ಸಭೆ ನಡೆಯಲಿದ್ದು, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹೈದೆ ಸುಗಾ ಜೊತೆಗೆ ಮೋದಿ ಮತ್ತು ಬೈಡೆನ್ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನನ್ನಗೆ ಸಾವಿನ ಭಯವಿರಲಿಲ್ಲ: ವಿಮಾನವನ್ನು ಪತನಗೊಳಿಸುವುದೇ ಉದ್ದೇಶವಾಗಿತ್ತು! ತನಿಖಾಧಿಕಾರಿಗಳ ಮುಂದೆ ಸತ್ಯ ಕಕ್ಕಿದ ಸಹ-ಪೈಲಟ್ ಹಮ್ಮಾಮಿ

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!

'ಹಿಂದೂಗಳಲ್ಲ, ಮುಸ್ಲಿಮರೇ ಕಳ್ಳ​ ವೋಟು ಹಾಕೋದು': ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್-Video

ಫುಟ್‌ಬಾಲ್‌ನಂತೆ 'ನನ್ನನ್ನು ಎಸೆದರು! SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!