ಸಾಂದರ್ಭಿಕ ಚಿತ್ರ 
ದೇಶ

ದೇಶದ ಕನಿಷ್ಠ ಶೇ.66 ರಷ್ಟು ವಯಸ್ಕರಿಗೆ ಕೋವಿಡ್ ಮೊದಲ ಡೋಸ್ ಲಸಿಕೆ, ಶೇ. 23 ರಷ್ಟು ಜನ ಎರಡೂ ಡೋಸ್ ಪಡೆದಿದ್ದಾರೆ: ಕೇಂದ್ರ

ದೇಶದಲ್ಲಿ ಕನಿಷ್ಠ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ನವದೆಹಲಿ: ದೇಶದಲ್ಲಿ ಕನಿಷ್ಠ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಗ್ರಾಮೀಣ ಪ್ರದೇಶಗಳಲ್ಲಿನ ಕೇಂದ್ರಗಳಲ್ಲಿ ಶೇಕಡಾ 63.7 ರಷ್ಟು ಕೋವಿಡ್ ಲಸಿಕೆ ನೀಡಲಾಗಿದೆ ಮತ್ತು ನಗರ ಪ್ರದೇಶಗಳಲ್ಲಿ ಶೇಕಡ 35.4 ರಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಗ್ರಾಮೀಣ ಅಥವಾ ನಗರ ಪ್ರದೇಶದ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಒಟ್ಟು 68.2 ಲಕ್ಷ ಡೋಸ್‌(ಸರಿಸುಮಾರು 0.95 ಶೇಕಡಾ) ಲಸಿಕೆ ನೀಡಿದ ಬಗ್ಗೆ ಯಾವುದೇ ಟ್ಯಾಗ್ ಮಾಡಲಾಗಿಲ್ಲ ಎಂದು ಅವರು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್ ಲಸಿಕೆಯನ್ನು ಅಂಗವಿಕಲರಿಗೆ ಮತ್ತು ಇತರೆ ಅಸಹಾಯಕರಿಗೆ ಮನೆಯಲ್ಲಿಯೇ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಲಸಿಕೆ ಹಾಕಿದವರಿಗೆ 10 ದಿನಗಳ ಕ್ಯಾರೆಂಟೈನ್‌ನ ವಿವಾದಿತ ಬ್ರಿಟನ್ ನಿಯಮದ ಕುರಿತು ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಈ ಪ್ರೋಟೋಕಾಲ್ ಅನ್ನು ಭಾರತ 'ತಾರತಮ್ಯ' ನೀತಿ ಎಂದು ಕರೆದಿದೆ. ಎರಡೂ ದೇಶಗಳು ಈ ವಿಷಯದ ಬಗ್ಗೆ ಮಾತುಕತೆ ನಡೆಸುತ್ತಿವೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel