ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಛತ್ತೀಸ್ಗಢ: ನಿರಂತರ ಸ್ತನ್ಯಪಾನದಿಂದ ಬೇಸತ್ತ ಮಹಿಳೆ, 2 ವರ್ಷದ ಮಗುವಿನ ಹತ್ಯೆ!

ನಿರಂತರ ಸ್ತನ್ಯಪಾನದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯೊಂದು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 23 Sept 2021, 1:55 pm

ಕೊರ್ಬಾ: ನಿರಂತರ ಸ್ತನ್ಯಪಾನದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯೊಂದು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಿಲ್ಲಾ ಕೇಂದ್ರದಿಂದ 10 ಕಿಮೀ ದೂರದಲ್ಲಿರುವ ಸೆಕ್ಟರ್ -5 ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖಾ ವರದಿಗಳ ಪ್ರಕಾರ, ಮಗುವನ್ನು ಹತ್ಯೆಗೈದ ಮಹಿಳೆ 2014ರಿಂದಲೂ ಮಾನಸಿಕ ರೋಗದಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಸಿದ್ದಾರೆ. 

Advertisement

Advertisement

ಹಾಲಿಗಾಗಿ ಮಗು ನಿರಂತರವಾಗಿ ಹಠ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇದರಿಂದ ಬೇಸತ್ತ ಮಹಿಳೆ ಮಗುವಿನ ತಲೆಯನ್ನು ನೆಲಕ್ಕೆ ಚಚ್ಚಿದ್ದಾಳೆ. ಇದರಿಂದ ಮಗುವಿನ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement