ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 31,923 ಹೊಸ ಕೇಸ್ ಪತ್ತೆ, 282 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,923 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,923 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33563421ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 31,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,28,15,731ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 15,27,443 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 55,83,67,013 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 83,39,90,049 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ