ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

Nagaraja AB

ನವದೆಹಲಿ: ಈವರೆಗೂ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿ ಗೂ ಅಧಿಕ ಕೋವಿಡ್ ಲಸಿಕೆಗಳನ್ನು ಪೂರೈಸಲಾಗಿದೆ. ಸುಮಾರು 94 ಲಕ್ಷ ಡೋಸ್ ಪೈಪ್ ಲೈನ್ ನಲ್ಲಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಪ್ರಸ್ತುತ ಲಸಿಕೆಯ 4.15 ಕೋಟಿ ಡೋಸ್ ಬಳಕೆಯಾಗದ ಲಸಿಕೆಗಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿರುವುದಾಗಿ ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರ ಲಸಿಕೆ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರವ್ಯಾಪಿ ಲಸಿಕೆ ಹಾಕುವಿಕೆ ಭಾಗವಾಗಿ, ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT