ರಾಹುಲ್ ಗಾಂಧಿ 
ದೇಶ

ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ

ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ. 

ಪಣಜಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ. 

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್'ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ. 

ಗೋವಾದಲ್ಲಿ ಬಿಜೆಪಿಯನ್ನು ಸೋಲಿಸಿ ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದು, ಇದಕ್ಕಾಗಿ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ‌ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ‘ ಎಂದೂ ಅವರು ತಿಳಿಸಿದ್ದಾರೆ.

ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!