ಸಂಗ್ರಹ ಚಿತ್ರ 
ದೇಶ

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ: ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತವನ್ನು ಗುಲಾಬ್ ಎಂದು ಹೆಸರಿಸಲಾಗಿದೆ. ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಚಂಡಮಾರುತ ಹಾದುಹೋಗಲಿರುವ ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗೋಪಾಲಪುರದಿಂದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 470 ಕಿ.ಮೀ. ದೂರ ಮತ್ತು ಕಾಳಿಂಗಪಟ್ಟಣಂನ ಪೂರ್ವದಲ್ಲಿ 540 ಕಿ.ಮೀ. ದೂರದಲ್ಲಿ ತೀವ್ರವಾದ ವಾಯುಭಾರ ಕುಸಿತ ಆಗಿರುವ ಹಿನ್ನೆಲೆ ಗುಲಾಬ್​ ಚಂಡಮಾರುತ ಏಳಲಿದೆ.

ಈ ನಡುವೆ ಚಂಡಮಾರುತದ ಪ್ರಭಾವ ಹೆಚ್ಚಾಗಿ ಉಂಟಾಗಲಿರುವ ಪರಿಸ್ಥಿತಿ ಎದುರಿಸಲು ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಗಾಳಿ-ಮಳೆ ಜಾಸ್ತಿ ಇರಲಿದ್ದು, ಸೆಪ್ಟೆಂಬರ್​ 25ರ ನಂತರ ಮುಂದಿನ ಸೂಚನೆವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ ಎಂದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಇಂದು ಆಂಧ್ರಪ್ರದೇಶದ ಕರಾವಳಿ ತೀರದ ಸುತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಹಾಗೇ, ಮುಂದಿನ 2 ದಿನಗಳ ಕಾಲ ಒಡಿಶಾ ಮತ್ತು ಛತ್ತೀಸ್​ಗಢ್​​ನಲ್ಲೂ ಮಳೆ-ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಚಂಡಮಾರುತದ ಪರಿಣಾಮ ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿದುಬಂದಿದೆ. 

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್​ 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲಿ 2 ದಿನ ಮಳೆ 
'ಗುಲಾಬ್‌’ ಚಂಡಮಾರುತದ ಪ್ರಭಾವದಿಂದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣವಾಗಿ ಮಳೆಯಾಗಿದ್ದು, ರಾತ್ರಿ ಗಾಳಿ ಸಹಿತ ಜೋರು ಮಳೆಗೆ ಸಂಜಯನಗರದಲ್ಲಿ ಒಂದು ಮರ ಉರುಳಿ ಬಿದ್ದಿದೆ.

ಗುಲಾಬ್‌’ ಚಂಡಮಾರುತ ಸದ್ಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಭಾಗದಲ್ಲಿದ್ದು, ಅದರ ಪ್ರಭಾವದಿಂದ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ರಾತ್ರಿ ಮಳೆ ಸುರಿಯಿತು. ಸೆ.27ರವರೆಗೂ ನಗರದಲ್ಲಿ ಇದೇ ರೀತಿ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!