ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ 
ದೇಶ

ಮನಮೋಹನ್ ಸಿಂಗ್ ಬದಲಿಗೆ ಸೋನಿಯಾ ಗಾಂಧಿ ಶರದ್ ಪವಾರ್ ಅವರನ್ನು ಪಿಎಂ ಮಾಡಬೇಕಿತ್ತು: ರಾಮದಾಸ್ ಅಠಾವಳೆ

2004 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಪ್ರಧಾನ ಮಂತ್ರಿಯಾಗಬಹುದಿತ್ತು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಮುಂಬಯಿ: 2004 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಪ್ರಧಾನ ಮಂತ್ರಿಯಾಗಬಹುದಿತ್ತು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಇಂದೋರ್‌ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಮದಾಸ್ ಅಠಾವಳೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದರೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 2004 ರ ಚುನಾವಣೆಯ ನಂತರ ಭಾರತದ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ. 

ರಾಮದಾಸ್ ಅಠಾವಳೆ ಸೋನಿಯಾ ಗಾಂಧಿ 2004 ರಲ್ಲಿ ಪ್ರಧಾನಿಯಾಗಬೇಕಿತ್ತು, ಅವರು ಆ ಸ್ಥಾನವನ್ನು ಸ್ವೀಕರಿಸದಿದ್ದಾಗ ಕಾಂಗ್ರೆಸ್ ತನ್ನನ್ನು ಬಲಪಡಿಸಲು ಪಕ್ಷದ ಹಿರಿಯ ನಾಯಕ ಶರದ್ ಪವಾರ್ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕಿತ್ತು ಎಂದು ಅವರು ಹೇಳಿದ್ದಾರೆ. 2004 ರ ಚುನಾವಣೆಯಲ್ಲಿ ಯುಪಿಎ ಬಹುಮತ ಪಡೆದಾಗ, ನಾನು ಸೋನಿಯಾ ಗಾಂಧಿಗೆ ಪ್ರಧಾನಿಯಾಗಲು ಸಲಹೆ ನೀಡಿದ್ದೆ. ಅವರು ವಿದೇಶಿಗರು ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂಬುವುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಲು ಸಾಧ್ಯವಾದರೆ, ಸೋನಿಯಾ ಗಾಂಧಿಗೆ ಭಾರತದ ಪ್ರಜೆ, ರಾಜೀವ್ ಗಾಂಧಿಯವರ ಪತ್ನಿ (ಮಾಜಿ ಪ್ರಧಾನಿ) ಮತ್ತು ಲೋಕಸಭೆಯಲ್ಲಿ ಸಂಸತ್ ಸದಸ್ಯರು. ಹೀಗಿರುವಾಗ ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಅಠಾವಳೆ ಪ್ರಶ್ನಿಸಿದ್ದಾರೆ.

ಶರದ್ ಪವಾರ್ ಕೂಡಾ ಜನ ನಾಯಕರಾಗಿ ಪ್ರಧಾನಮಂತ್ರಿ ಹುದ್ದೆಗೆ ಅರ್ಹರು ಮತ್ತು ಮನಮೋಹನ್ ಸಿಂಗ್ ಬದಲಿಗೆ ಕಾಂಗ್ರೆಸ್ ಅವರನ್ನು ಪ್ರಧಾನಿಯಾಗಿಸಬೇಕಿತ್ತು, ಆದರೆ ಸೋನಿಯಾ ಗಾಂಧಿ ಹಾಗೆ ಮಾಡಲಿಲ್ಲ ಎಂದು ಅಠಾವಳೆ ಹೇಳಿದ್ದಾರೆ. ಅಲ್ಲದೇ ಪವಾರ್ 2004 ರಲ್ಲಿ ದೇಶದ ಪ್ರಧಾನಿಯಾಗಿದ್ದರೆ, ಕಾಂಗ್ರೆಸ್ ಇಂದಿನ ಪರಿಸ್ಥಿತಿಯನ್ನು ಎದುರಿಸುತ್ತಿರಲಿಲ್ಲ. ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT