ಬಿಜೆಪಿ ಮುಖಂಡ ದಿಲೀಪ್ ಘೋಷ್ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಚಿತ್ರ 
ದೇಶ

ಭವಾನಿಪುರ ಉಪ ಚುನಾವಣೆ: ಮತದಾನದ ದಿನ ಸೆಕ್ಷನ್ 144, ಕೇಂದ್ರಿಯ ಪಡೆ ನಿಯೋಜನೆಗೆ ಬಿಜೆಪಿ ಒತ್ತಾಯ

ಉಪ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 30 ರಂದು ಭವಾನಿಪುರ ಕ್ಷೇತ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಬೇಕು ಹಾಗೂ ಪ್ರತಿಯೊಂದು ಮತಗಟ್ಟೆಗಳಲ್ಲಿ ಕೇಂದ್ರಿಯ ಪ್ಯಾರಾಮಿಲಿಟರಿ ಪಡೆ ನಿಯೋಜಿಸಬೇಕೆಂದು ಬಿಜೆಪಿ ನಿಯೋಗವೊಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ, ಮನವಿ ಸಲ್ಲಿಸಿದೆ.

ಕೊಲ್ಕತ್ತಾ: ಬಿಜೆಪಿ ಪಕ್ಷದ ಮುಖಂಡರ ಮೇಲೆ ದಾಳಿ ಆರೋಪದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 30 ರಂದು ಭವಾನಿಪುರ ಕ್ಷೇತ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಬೇಕು ಹಾಗೂ ಪ್ರತಿಯೊಂದು ಮತಗಟ್ಟೆಗಳಲ್ಲಿ ಕೇಂದ್ರಿಯ ಪ್ಯಾರಾಮಿಲಿಟರಿ ಪಡೆ ನಿಯೋಜಿಸಬೇಕೆಂದು ಬಿಜೆಪಿ ನಿಯೋಗವೊಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ, ಮನವಿ ಸಲ್ಲಿಸಿದೆ.

ಮುಕ್ತ ಮತ್ತು ನ್ಯಾಯಸಮ್ಮತವಾದ ಮತದಾನವನ್ನು ಖಚಿತಪಡಿಸಿಕೊಳ್ಳಲು ಮತದಾನದ ದಿನದಂದು ಕ್ಷೇತ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೋಲ್ಕತ್ತಾ ಪೊಲೀಸರ ನೇರ ನಿಯಂತ್ರಣವನ್ನು ಅನುಮತಿಸಬಾರದು ಎಂದು ಬಿಜೆಪಿ ನಿಯೋಗವು ಸಿಇಒ ಆರಿಫ್ ಅಫ್ತಾಬ್ ಅವರನ್ನು ಒತ್ತಾಯಿಸಿದೆ.

ಪಕ್ಷದ ಬರಾಕ್‌ಪುರ್ ಸಂಸದ ಅರ್ಜುನ್ ಸಿಂಗ್ ಅವರು ಭವಾನಿಪುರದ ಹನುಮಾನ್ ಮಂದಿರದ ಬಳಿ ಹಗಲಿನಲ್ಲಿ ಹೇಗೆ ಅಣಕಿಸಿಲಾಯಿತು ಮತ್ತು ಪ್ರಚಾರ ಮಾಡದೆ ಹೇಗೆ ಹಿಂತಿರುಗಬೇಕಾಯಿತು ಎಂಬುದನ್ನು ಬಿಜೆಪಿ ಸಿಇಒಗೆ ತಿಳಿಸಿದೆ ಎಂದು ರಾಜ್ಯಸಭಾ ಸಂಸದ ಸ್ವಪನ್ ದಾಸ್ ಗುಪ್ತ ಸುದ್ದಿಗಾರರಿಗೆ ತಿಳಿಸಿದರು.

ಎರಡನೇ ಘಟನೆಯಲ್ಲಿ, ಪಕ್ಷದ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮೇಲೆ ನಡೆದ ದಾಳಿಯನ್ನು ಸಹ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಸಲಾಗಿದೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ