ಅಮರೀಂದರ್ ಸಿಂಗ್ 
ದೇಶ

ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್, ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು,...

ನವದೆಹಲಿ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಕ್ಯಾಪ್ಟನ್ ಕೇಸರಿ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ.

ಅಮರೀಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ಇಂದು ಅಮಿತ್ ಶಾ ಭೇಟಿ ಮಾಡಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಭೇಟಿ ಕೇವಲ "ಸೌಜನ್ಯದ ಭೇಟಿ" ಎಂದು ಪಂಜಾಬ್ ಮಾಜಿ ತಂಡ ಹೇಳಿಕೊಂಡಿದೆ. ಆದರೆ ಸಿಂಗ್-ಶಾ-ನಡ್ಡಾ ಭೇಟಿಯು ಮುಂದಿನ ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಕೆಲವು ವರದಿಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

IPL 2026: RCB ಬ್ಯಾಟಿಂಗ್ ವೈಫಲ್ಯ, 4 ವಿಕೆಟ್ ಗಳಿಂದ ಗೆದ್ದ ಗುಜರಾತ್ ಟೈಟನ್ಸ್!

ಭಬಾನಿಪುರದ ಸ್ಟ್ರಾಂಗ್ ರೂಮ್‌ಗೆ ದೌಡಾಯಿಸಿದ ಮಮತಾ ಬ್ಯಾನರ್ಜಿ! EVM ಟ್ಯಾಂಪರಿಂಗ್ ಆರೋಪ

ನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ, ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆ

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

SCROLL FOR NEXT