ನವ್ ಜೋತ್ ಸಿಂಗ್ ಸಿಧು 
ದೇಶ

ಹೊರಗಿನವರಾದ ಸಿಧುವಿಗೆ ಉನ್ನತ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು: ಕಾಂಗ್ರೆಸ್ ನಾಯಕರ ಪಶ್ಚಾತ್ತಾಪ

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು.

ನವದೆಹಲಿ: ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವ್ ಜೋತ್ ಸಿಂಗ್ ಸಿಧು ರಾಜಿನಾಮೆ ನೀಡಿದ ಬೆನ್ನಲ್ಲೇ ಸಿಧುವನ್ನು ಪಕ್ಷದ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ. 

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು. ಆದರೆ ಏಕಾಏಕಿ ಅವರನ್ನು ಉನ್ನತ ಸ್ಥಾನಕ್ಕೆ ತಂದು ಕೂರಿಸಿದ್ದು ತಪ್ಪು ಎಂಡು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಸಿಧು ಬಿಜೆಪಿಯಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟು ಸೋತಿದ್ದರು. ಆತ ಆಪ್ ಪಕ್ಷದ ಜೊತೆಗೂ ಮಾತುಕತೆ ನಡೆಸಿದ್ದರು. ಅಂಥಾ ಸಮಯದಲ್ಲಿ ಅಮರಿಂದರ್ ಸಿಂಗ್ ಅವರನ್ನು ಬದಿಗೊತ್ತಿ ಸಿಧು ಅವರನ್ನು ಕಾಂಗ್ರೆಸ್ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸಿದಂತಾಗುತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. 

ಲಾಲ್ ಬಹದೂರ್ ಶಾಸ್ತ್ರಿ ಮೊಮ್ಮಗ, ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಸಲಹೆಗಾರ ವಿಭಾಕರ್ ಶಾಸ್ತ್ರಿ ಕೂಡಾ ಈ ಮಾತಿಗೆ ಸಹಮತ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ