ಲುಯಿಜಿನೊ ಫಲೆರೊ 
ದೇಶ

ಗೋವಾ ಮಾಜಿ ಸಿಎಂ, ಕಾಂಗ್ರೆಸ್ ಶಾಸಕ ಲುಯಿಜಿನೊ ಫಲೆರೊ ಟಿಎಂಸಿ ಸೇರ್ಪಡೆ

ಕಾಂಗ್ರೆಸ್ ತೊರೆದ ಎರಡು ದಿನಗಳ ನಂತರ, ಗೋವಾದ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫಲೆರೊ ಅವರು ಬುಧವಾರ ತೃಣಮೂಲ ಕಾಂಗ್ರೆಸ್ ಸೇರಿದರು.

ಕೋಲ್ಕತ್ತಾ: ಕಾಂಗ್ರೆಸ್ ತೊರೆದ ಎರಡು ದಿನಗಳ ನಂತರ, ಗೋವಾದ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫಲೆರೊ ಅವರು ಬುಧವಾರ ತೃಣಮೂಲ ಕಾಂಗ್ರೆಸ್ ಸೇರಿದರು.

ಕಾಂಗ್ರೆಸ್ ಶಾಸಕ ಲುಯಿಜಿನೊ ಫಲೆರೊ ಅವರು ಇಂದು ಕೋಲ್ಕತ್ತಾದಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಹಿರಿಯ ನಾಯಕರಾದ ಸೌಗತಾ ರೇ ಮತ್ತು ಸುಬ್ರತಾ ಮುಖರ್ಜಿ ಅವರ ಸಮ್ಮುಖದಲ್ಲಿ ಟಿಸಿಎಂ ಸೇರಿದರು.

ಟಿಎಂಸಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಫಲೆರೊ ಅವರು, "ಆರಂಭದಲ್ಲಿ, ನಾನು ಕಾಂಗ್ರೆಸ್ ಮನುಷ್ಯ ಎಂದು ಹೇಳಬೇಕು. ನನಗೆ ಒಂದೇ ಸಿದ್ಧಾಂತ ಮತ್ತು ತತ್ವಗಳಿವೆ. ಇಂದು ನಾನು ಟಿಎಂಸಿಗೆ ಸೇರುವಾಗ, ನನ್ನ ಕನಸು ಈ ಕಾಂಗ್ರೆಸ್ ಕುಟುಂಬವನ್ನು ಮತ್ತೊಮ್ಮೆ ಒಟ್ಟುಗೂಡಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಬಿಜೆಪಿಯನ್ನು ಸೋಲಿಸುವುದು ನನ್ನ ಪ್ರಮುಖ ಗುರಿ ಎಂದಿದ್ದಾರೆ.

ನಿನ್ನೆ ಫಲೆರೊ ಮತ್ತು ಗೋವಾದ ಇತರ ಕೆಲವು ಕಾಂಗ್ರೆಸ್ ನಾಯಕರು ಟಿಎಂಸಿ ನಾಯಕರನ್ನು ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT