ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂಬೈ: ಕೆಇಎಂ ಆಸ್ಪತ್ರೆಯ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೊರೋನಾ!

ವಾಣಿಜ್ಯ ನಗರಿ ಮುಂಬೈಯ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 30 Sept 2021, 3:35 pm

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಈ ಎಲ್ಲಾ ವಿದ್ಯಾರ್ಥಿಗಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದರು. ಆದಾಗ್ಯೂ, ಇದೀಗ ಸೋಂಕು ತಗುಲಿದ್ದು, ಕೆಲವರು ಸೋಂಕಿನ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ನಡೆದ ಕೆಲ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಿಂದ ಸೋಂಕು ಹರಡಿರುವ ಸಾಧ್ಯತೆಯಿರುವುದಾಗಿ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್-19: ಭಾರತದಲ್ಲಿಂದು 23,529 ಹೊಸ ಕೇಸ್ ಪತ್ತೆ, 311 ಮಂದಿ ಸಾವು

Advertisement

Advertisement

ಸೋಂಕು ತಗುಲಿದ ಇಬ್ಬರು ವಿದ್ಯಾರ್ಥಿಗಳನ್ನು ನಗರದ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳು ಕ್ವಾರಂಟೈನ್ ನಲ್ಲಿ ಇರಲು ತಿಳಿಸಲಾಗಿದೆ. ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಒಟ್ಟಾರೇ, 1,100 ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್ ಅಧ್ಯಯನ ಮಾಡುತ್ತಿದ್ದಾರೆ.

Related Article

ಆಯುಷ್ ಸಚಿವಾಲಯದಿಂದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಿಟ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments