ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 23,529 ಹೊಸ ಕೇಸ್ ಪತ್ತೆ, 311 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 23,529 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 23,529 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,39,980ಕ್ಕೆ ತಲುಪಿದ್ದು, 4,48,062ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,77,020ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 28,178 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,30,14,898ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 15,06,254 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 56,89,56,439 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 88,34,70,578 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll: ಕ್ಷಣಕ್ಕೊಂದು ತಿರುವು; ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Video

GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?

ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು, ಪೋಷಕರ ಪ್ರತಿಭಟನೆ!

'ಅಂಥವನು ನಾಯಕನಲ್ಲ' ವಿಜಯ್ ಸೇತುಪತಿ ವಿವಾದಾತ್ಮಕ ಹೇಳಿಕೆ ನಡುವೆ ತಮಿಳುನಾಡು ಸಿಎಂ ಹಾಡಿ ಹೊಗಳಿದ ನಿರ್ದೇಶಕ ಅಟ್ಲೀ!