ದೇಶ

ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು

Ramyashree GN

ಮುಜಾಫರ್‌ನಗರ: 30 ವರ್ಷದ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು, ಗನ್‌ಪಾಯಿಂಟ್‌ನಲ್ಲಿ ಆಕೆಗೆ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಜಾಫರ್‌ನಗರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಈ ಸಂಬಂಧ ಎಲ್ಲಾ ಏಳು ಆರೋಪಿಗಳನ್ನು ಭಾನುವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ಹಸುಗಳಿಗೆ ಹುಲ್ಲು ತರಲೆಂದು ಹೊಲಕ್ಕೆ ಹೋಗಿದ್ದಳು. ಅಲ್ಲಿ ಆರೋಪಿಗಳು ತನಗೆ ಲೈಂಗಿಕ ಕಿರುಕುಳ ನೀಡಿದರು ಮತ್ತು ಬಂದೂಕು ತೋರಿಸಿ ತನ್ನ ಬಟ್ಟೆಗಳನ್ನು ಬಿಚ್ಚುವಂತೆ ಒತ್ತಾಯಿಸಿ ನಂತರ ವಿಡಿಯೋ ಮಾಡಿದ್ದಾರೆ ಎಂದು ದೂರಿದ್ದಾರೆ.

ಆರೋಪಿಗಳನ್ನು ಅನುಜ್, ಕುಲದೀಪ್, ಅಂಕಿತ್, ರವಿ, ರಿಜ್ವಾನ್, ಚೋಟಾ ಮತ್ತು ಅಬ್ದುಲ್ ಎಂದು ಪೊಲೀಸರು ಗುರುತಿಸಿದ್ದಾರೆ.

SCROLL FOR NEXT