ದೇಶ

ತಿಹಾರ್‌ ಜೈಲಿನಲ್ಲಿ 10 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಯಾಸಿನ್ ಮಲಿಕ್

Lingaraj Badiger

ನವದೆಹಲಿ: ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದ 10 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ.

ನಿಮ್ಮ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಲಿಕ್ ಗೆ ತಿಳಿಸಿದ ನಂತರ ಇಂದು ಸಂಜೆ ಉಪವಾಸವನ್ನು ಕೈಬಿಟ್ಟರು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ತಾನು ಆರೋಪಿಯಾಗಿರುವ ರುಬಯ್ಯ ಸಯೀದ್‌ ಅಪಹರಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಮ್ಮು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು ಎಂಬ ತನ್ನ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಮತ್ತು ತನ್ನ ವಿರುದ್ಧದ ಪ್ರಕರಣಗಳ ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಆರೋಪಿಸಿ ಜುಲೈ 22ರಂದು ಮಲಿಕ್‌ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

2017 ರ ಭಯೋತ್ಪಾದಕ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಅವರನ್ನು ದೋಷಿ ಎಂದು ಘೋಷಿಸಲಾಗಿದ್ದು, ಮೇ 25 ರಂದು ಎನ್ಐಎ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

SCROLL FOR NEXT