ದೇಶ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 24 ಗಂಟೆಗಳಲ್ಲಿ 27 ಜನರು ಸಾವು

Ramyashree GN

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 13,734 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,50,009ಕ್ಕೆ ಏರಿಕೆಯಾಗಿದೆ. ಇದೇ ವೇಳೆ 17,897 ಜನರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 27 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ 5,26,430 ಜನರು ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ 1,39,792 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕಣಗಳ ಪೈಕಿ ಶೇ 0.32ರಷ್ಟಿದೆ. ರಾಷ್ಟ್ರೀಯ ಚೇತರಿಕೆ ದರವು ಶೇ 98.49ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 3.34ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 4.79ರಷ್ಟಿದೆ. ಮರಣ ಪ್ರಮಾಣ ಶೇ 1.20ರಷ್ಟಿದೆ. ಸದ್ಯ ಈವರೆಗೆ ಒಟ್ಟು 4,33,83,787 ಜನರು ಗುಣಮುಖರಾಗಿದ್ದಾರೆ.

ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ ದೇಶದಲ್ಲಿ 204.6 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

SCROLL FOR NEXT