ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 17,135 ಹೊಸ ಪ್ರಕರಣ, 47 ಜನರು ಸೋಂಕಿನಿಂದ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 17,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,50,009ಕ್ಕೆ ಏರಿಕೆಯಾಗಿದೆ. ಇದೇ ವೇಳೆ 17,897 ಜನರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 17,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,67,144ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 47 ಜನರು ಸಾವಿಗೀಡಾಗಿದ್ದು, ಈವರೆಗೆ 5,26,477 ಜನರು ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ 1,37,057 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕಣಗಳ ಪೈಕಿ ಶೇ 0.31ರಷ್ಟಿದೆ. ರಾಷ್ಟ್ರೀಯ ಚೇತರಿಕೆ ದರವು ಶೇ 98.49ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 3.69ರಷ್ಟಿದ್ದರೆ, ಮರಣ ಪ್ರಮಾಣ ಶೇ 1.20ರಷ್ಟಿದೆ. ಸದ್ಯ ಈವರೆಗೆ ಒಟ್ಟು 4,34,03,610 ಜನರು ಗುಣಮುಖರಾಗಿದ್ದಾರೆ.

ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ ದೇಶದಲ್ಲಿ 204.84 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!