ದೇಶ

ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಧಂಖರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ

Lingaraj Badiger

ಲಖನೌ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ "ದೊಡ್ಡ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ" ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಖರ್‌ ಅವರಿಗೆ ಬೆಂಬಲವುದಾಗಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದಾರೆ.

ಎನ್ ಡಿಎ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಟ್ವಿಟ್ ಮಾಡಿದ ಬಿಎಸ್‌ಪಿ ಮುಖ್ಯಸ್ಥೆ, “ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಒಮ್ಮತದ ಕೊರತೆಯು ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲು ಕಾರಣವಾಯಿತು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಈಗ, ಉಪ ರಾಷ್ಟ್ರಪತಿ ಸ್ಥಾನಕ್ಕೂ ಇದೇ ರೀತಿಯ ಪರಿಸ್ಥಿತಿ ಎದುರಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದಿದ್ದಾರೆ.

"ದೊಡ್ಡ ಸಾರ್ವಜನಿಕ ಹಿತಾಸಕ್ತಿ ಮತ್ತು ಬಿಎಸ್ ಪಿಯ ಸ್ವಂತ ಹೋರಾಟದ ದೃಷ್ಟಿಯಿಂದ, ಭಾರತದ ಉಪರಾಷ್ಟ್ರಪತಿ ಹುದ್ದೆಯ ಚುನಾವಣೆಯಲ್ಲಿ ಶ್ರೀ ಜಗದೀಪ್ ಧಂಖರ್ ಅವರಿಗೆ ಬೆಂಬಲವನ್ನು ನೀಡಲು ಪಕ್ಷ ನಿರ್ಧರಿಸಿದೆ ಮತ್ತು ನಾನು ಅದನ್ನು ಔಪಚಾರಿಕವಾಗಿ ಇಂದು ಘೋಷಿಸುತ್ತಿದ್ದೇನೆ" ಎಂದು ಮಾಯಾವತಿ ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲ ಧಂಖರ್ ವಿರುದ್ಧ ಪ್ರತಿಪಕ್ಷಗಳು ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವ ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿವೆ.

SCROLL FOR NEXT