ಶೋಧ ಕಾರ್ಯಾಚರಣೆ ವೇಳೆ ವಶಪಡಿಸಿಕೊಂಡ ಹಣ 
ದೇಶ

ಮಧ್ಯಪ್ರದೇಶ: ಆದಾಯಕ್ಕಿಂತ ಅಧಿಕ ಆಸ್ತಿ; ಶೋಧ ನಡೆಸುವ ವೇಳೆ ವಿಷ ಕುಡಿದ ರಾಜ್ಯ ಸರ್ಕಾರದ ಗುಮಾಸ್ತ

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪದ ಮೇರೆಗೆ ಮಧ್ಯಪ್ರದೇಶ ಪೊಲೀಸ್‌ ಆರ್ಥಿಕ ಅಪರಾಧ ವಿಭಾಗ (EOW) ಶೋಧ ಕಾರ್ಯ ನಡೆಸುತ್ತಿರುವ ವೇಳೆ ವಿಷವನ್ನು ಸೇವಿಸಿದ ಸರ್ಕಾರಿ ಗುಮಾಸ್ತರೊಬ್ಬರ ಮನೆಯಿಂದ 85 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪದ ಮೇರೆಗೆ ಮಧ್ಯಪ್ರದೇಶ ಪೊಲೀಸ್‌ ಆರ್ಥಿಕ ಅಪರಾಧ ವಿಭಾಗ (EOW) ಶೋಧ ಕಾರ್ಯ ನಡೆಸುತ್ತಿರುವ ವೇಳೆ ವಿಷವನ್ನು ಸೇವಿಸಿದ ಸರ್ಕಾರಿ ಗುಮಾಸ್ತರೊಬ್ಬರ ಮನೆಯಿಂದ 85 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ತಿಂಗಳಿಗೆ ಸುಮಾರು 50 ಸಾವಿರ ವೇತನ ಪಡೆಯುತ್ತಿರುವ ಮೇಲ್ದರ್ಜೆಯ ಗುಮಾಸ್ತ ಹೀರೋ ಕೇಸ್ವಾನಿ ಅವರ ನಿವಾಸದಲ್ಲಿ ನಡೆಸಿದ ಶೋಧಕಾರ್ಯದ ವೇಳೆ, ಇಒಡಬ್ಲ್ಯು ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಬುಧವಾರ ತಡರಾತ್ರಿಯವರೆಗೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಬೈರಾಗರ್ ಪ್ರದೇಶದಲ್ಲಿರುವ ಗುಮಾಸ್ತರ ಮನೆಯಲ್ಲಿ ಪತ್ತೆಯಾದ ಹಣದ ರಾಶಿಯ ನಿಖರವಾದ ಮೌಲ್ಯವನ್ನು ತಿಳಿಯಲು ನೋಟು ಎಣಿಸುವ ಯಂತ್ರವನ್ನು ತರಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕ್ಲರ್ಕ್ ಆಗಿದ್ದ ಕೇಸ್ವಾನಿ, ಶೋಧಕಾರ್ಯ ನಡೆಸಲು ಇಒಡಬ್ಲ್ಯು ತಂಡವು ತನ್ನ ಮನೆಗೆ ಬಂದಾಗ ಬಾತ್‌ರೂಂ ಕ್ಲೀನರ್ ನ್ನು ಸೇವಿಸಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ (ಇಒಡಬ್ಲ್ಯು) ರಾಜೇಶ್ ಮಿಶ್ರಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಕೇಸ್ವಾನಿ ಅವರು ತಮ್ಮ ಮನೆಯಲ್ಲಿ ಶೋಧ ಕಾರ್ಯ ನಡೆಸದಂತೆ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸಿ ತಳ್ಳಿದರು. ವಿಷ ಸೇವಿಸಿದ್ದ ಕೇಸ್ವಾನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಸಂಜೆ ವೇಳೆಗೆ ಕೇಸ್ವಾನಿ ಅವರ ನಿವಾಸದಲ್ಲಿ 85 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ. ಅವರು ಒಟ್ಟಾರೆ 4 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಅಂದಾಜಿಸಲಾಗಿದೆ. ಬೆಲೆಬಾಳುವ ಅಲಂಕಾರಿಕ ವಸ್ತುಗಳು ಪತ್ತೆಯಾಗಿರುವ ಅವರ ನಿವಾಸವು ಸುಮಾರು 1.5 ಕೋಟಿ ಮೌಲ್ಯದ್ದಾಗಿದೆ ಎಂದು ಇಒಡಬ್ಲ್ಯು ಅಧಿಕಾರಿಗಳು ತಿಳಿಸಿದ್ದಾರೆ.

ಕೇಸ್ವಾನಿ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಲಕ್ಷ ಲಕ್ಷ ಹಣ ಜಮೆಯಾಗಿದೆ. ಯಾವುದೇ ಆದಾಯದ ಮೂಲವಿಲ್ಲದ ಗೃಹಿಣಿಯಾದ ಅವರ ಪತ್ನಿ ಹೆಸರಿನಲ್ಲಿ ಹೆಚ್ಚಿನ ಆಸ್ತಿಗಳನ್ನು ಖರೀದಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT