ಉದಯ್ ಉಮೇಶ್ ಲಲಿತ್-ವಿಎನ್ ರಮಣ 
ದೇಶ

ಸಿಜೆಐ ರಮಣ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ: ನ್ಯಾಯಮೂರ್ತಿ ಲಲಿತ್ ಹೆಸರು ಶಿಫಾರಸು!

ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ತಮ್ಮ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದರು.

ನವದೆಹಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ತಮ್ಮ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದರು.

ಸಿಜೆಐ ರಮಣ ಅವರು ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ಖುದ್ದಾಗಿ ನ್ಯಾಯಮೂರ್ತಿ ಲಲಿತ್ ಅವರಿಗೆ ನೀಡಿದ್ದಾರೆ. ರಮಣ ಅವರ ನಂತರದ ಹಿರಿತನದಲ್ಲಿ ನ್ಯಾಯಮೂರ್ತಿ ಲಲಿತ್ ಅವರಿದ್ದಾರೆ. 

2021ರ ಏಪ್ರಿಲ್ 24ರಂದು ಎಸ್ ಎ ಬೋಬ್ಡೆ ಅವರಿಂದ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಮಣ ಅವರು 16 ತಿಂಗಳ ಅವಧಿಯ ನಂತರ ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ.

ನಂತರ ನ್ಯಾಯಮೂರ್ತಿ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಅಧಿಕಾರಾವಧಿಯು ಚಿಕ್ಕದಾಗಿರಲಿದ್ದು 2022ರ ನವೆಂಬರ್ 8ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯುತ್ತಾರೆ.

ಪ್ರಸ್ತುತ ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ-ಅತ್ಯಂತ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಲಲಿತ್ ಅವರು 1983ರ ಜೂನ್ ನಿಂದ ವಕೀಲಿಗಿರಿ ಆರಂಭಿಸಿದ್ದರು. ಡಿಸೆಂಬರ್ 1985ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ್ದರು. ನಂತರ 1986ರ ಜನವರಿಯಿಂದ ದೆಹಲಿಯಲ್ಲಿ ಅಭ್ಯಾಸ ಆರಂಭಿಸಿದ್ದರು.

ಏಪ್ರಿಲ್ 2004ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಹಿರಿಯ ವಕೀಲರಾಗಿ ನಾಮನಿರ್ದೇಶನಗೊಂಡಿದ್ದ ಅವರು ಹಲವಾರು ಪ್ರಕರಣಗಳಲ್ಲಿ ಅಮಿಕಸ್ ಕ್ಯೂರಿಯಾಗಿ ಕಾಣಿಸಿಕೊಂಡರು. ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಎಲ್ಲಾ 2ಜಿ ಪ್ರಕರಣಗಳನ್ನು ವಿಚಾರಣೆ ಮಾಡಲು ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಅವರನ್ನು ನೇಮಿಸಲಾಗಿತು. ನ್ಯಾಯಮೂರ್ತಿ ಲಲಿತ್ ಅವರು ಎರಡು ಅವಧಿಗೆ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಕಾನೂನು ಸೇವೆಗಳ ಸಮಿತಿಯ ಸದಸ್ಯರಾಗಿದ್ದರು.

ಬಾರ್‌ನಿಂದ ನೇರವಾಗಿ ಬಡ್ತಿ ಪಡೆದ ಅವರು 2014ರ ಆಗಸ್ಟ್ 13ರಂದು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT