ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; ಸಾವಿಗೀಡಾದವರ ಸಂಖ್ಯೆಯೂ ಅಧಿಕ

ಕಳೆದ 24 ಗಂಟೆಗಳ ಅವಧಿಯಲ್ಲಿ 19,893 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ. ಸದ್ಯ 1,36,478 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ ಏರಿಳಿತ ಮುಂದುವರಿದಿದ್ದು, ಇಂದು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಅಷ್ಟೇ ಅಲ್ಲದೆ, ಸೋಂಕಿನಿಂದ ನಿನ್ನೆಗಿಂತ ಅಧಿಕ ಜನರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 19,893 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ. ಸದ್ಯ 1,36,478 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ ಕೊರೊನಾವೈರಸ್ ಸೋಂಕಿನಿಂದಾಗಿ 53 ಜನರು ಪ್ರಾಣ ಕಳೆದುಕೊಂಡಿದ್ದು, ಈವರೆಗೆ 5,26,530 ಜನರು ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.31ರಷ್ಟು ಸಕ್ರಿಯ ಪ್ರಕರಣಗಳು ಇದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.50ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 4.94ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 4.64ರಷ್ಟಿದೆ. ಸೋಂಕಿನಿಂದ ಈವರೆಗೆ 4,34,24,029 ಜನರು ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ 205.22 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ಜನರಿಗೆ ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್