ದೇಶ

ಕಾಂಗ್ರೆಸ್ ನ ಮೆಗಾ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ  ದೆಹಲಿ ಪೊಲೀಸ್

Srinivas Rao BV

ನವದೆಹಲಿ: ಬೆಲೆ ಏರಿಕೆ ವಿರೋಧಿಸಿ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
 
ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಹಾಗೂ ಅಗತ್ಯ ವಸ್ತುಗಳ ಮೇಲಿನ ಜಿಎಸ್ ಟಿ ಏರಿಕೆಯನ್ನು ವಿರೋಧಿಸಿ ಆ.05 ರಂದು ಕಾಂಗ್ರೆಸ್ ನವದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು.
 
ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ಕೈಗೊಳ್ಳಲಿರುವ ಕಾಂಗ್ರೆಸ್ ನಾಯಕರು ನಂತರ ಪ್ರತಿಭಟನೆಯ ಭಾಗವಾಗಿ ಪ್ರಧಾನಿ ನಿವಾಸಕ್ಕೆ ತೆರಳಿ ಅಲ್ಲಿ ಘೇರಾವ್ ಹಾಕುವ ಯೋಜನೆ ಹೊಂದಿದ್ದಾರೆ.
 
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ದೆಹಲಿ ಪೊಲೀಸರು ಪಕ್ಷದಿಂದ ಆಯೋಜನೆಗೊಂಡಿರುವ ಪ್ರತಿಭಟನೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ನಿಷೇಧಾಜ್ಞೆಯನ್ನೂ ಮೀರಿ ಪ್ರತಿಭಟನೆ ನಡೆಸಿದ್ದೇ ಆದಲ್ಲಿ ಕಾನೂನು ಕ್ರಮ ಕಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

SCROLL FOR NEXT