ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಸ್ವಾಮೀಜಿ ಆತ್ಮಹತ್ಯೆ, ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು

ರಾಜಸ್ಥಾನದ ಜಲೋರ್‌ನಲ್ಲಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕರು ರೆಸಾರ್ಟ್ ನಿರ್ಮಿಸಲು ಬಯಸಿದ ತಮ್ಮ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕರೊಬ್ಬರು ಒತ್ತಡ ಹೇರಿದ್ದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಜಲೋರ್‌ನಲ್ಲಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕರು ರೆಸಾರ್ಟ್ ನಿರ್ಮಿಸಲು ಬಯಸಿದ ತಮ್ಮ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕರೊಬ್ಬರು ಒತ್ತಡ ಹೇರಿದ್ದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳದಿಂದ ಸೂಸೈಡ್ ನೋಟ್ ವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ, ಅದರಲ್ಲಿನ ಅಂಶಗಳನ್ನು ಬಹಿರಂಗಪಡಿಸಿಲ್ಲ. ಜಲೋರ್ ನ ರಾಜಪುರ ಹಳ್ಳಿಯಲ್ಲಿ ಗುರುವಾರ ರಾತ್ರಿ ರವಿನಾಥ್ (60) ಸ್ವಾಮೀಜಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಪೊಲೀಸರು ಮೃತದೇಹವನ್ನು ಕೆಳಗಿಳಿಸಲು ಆಶ್ರಮದ ಭಕ್ತರು ಅವಕಾಶ ನೀಡಿರಲಿಲ್ಲ, ಸೂಸೈಡ್ ನೋಟ್ ನಲ್ಲಿನ ಅಂಶಗಳನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.

ಈ ಮಧ್ಯೆ ಬಿಜೆಪಿ ಶಾಸಕ ಪೂರಾರಾಮ್ ಚೌದರಿ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಪಾರದರ್ಶಕ ರೀತಿಯಲ್ಲಿ ತನಿಖೆಗೆ ಒತ್ತಾಯಿಸಿದ್ದಾರೆ. ಸ್ವಾಮೀಜಿಗಳ ದೂರಿನ ಆಧಾರದ ಮೇಲೆ ಶಾಸಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಲೋರ್ ಎಸ್ಪಿ ಹರ್ಷವರ್ಧನ್ ಅಗರ್ ವಾಲ್ ತಿಳಿಸಿದ್ದಾರೆ.

ರವಿನಾಥ್ ಸ್ವಾಮೀಜಿ ಆತ್ಮಹತ್ಯೆ ಬಗ್ಗೆ ಶುಕ್ರವಾರ ಬೆಳಗ್ಗೆಯಷ್ಟೇ ಮಾಹಿತಿ ಸಿಕ್ಕಿದ್ದು,  ಮೃತದೇಹವನ್ನು ಇನ್ನೂ ಮರದಿಂದ ಕೆಳಗೆ ಇಳಿಸಿಲ್ಲ, ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದ್ದು, ಈ ಬಗ್ಗೆ ಭಕ್ತರನ್ನು ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT