ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 19,400 ಹೊಸ ಪ್ರಕರಣ, 49 ಜನರು ಸಾವು

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 19,406 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4,41,26,994 ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 19,406 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4,41,26,994 ಕ್ಕೆ ಏರಿಕೆಯಾಗಿದೆ.

ಸದ್ಯ ದೇಶದಲ್ಲಿ 1,34,793 ಸಕ್ರಿಯ ಪ್ರಕರಣಗಳಿವೆ. ಇದೇ ಅವಧಿಯಲ್ಲಿ 49 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೂ 5,26,649 ಜನರು ಮೃತಪಟ್ಟಿದ್ದಾರೆ. ಈ ಪೈಕಿ 11 ಜನರು ಕೇರಳದಲ್ಲೇ ಸಾವಿಗೀಡಾದವರು ಎಂದು ಶನಿವಾರ ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿಯಲ್ಲಿ ತಿಳಿದುಬಂದಿದೆ.

ಒಟ್ಟು ಸೋಂಕು ಪ್ರಕರಣಗಳಲ್ಲಿ ಶೇ 0.31 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.50 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 4.96 ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಲ್ಲಿ ಈವರೆಗೆ 4,34,65,552 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಐವರು, ಛತ್ತೀಸ್‌ಗಢದಲ್ಲಿ ಮೂವರು, ದೆಹಲಿ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ತ್ರಿಪುರದಲ್ಲಿ ತಲಾ ಇಬ್ಬರು ಮತ್ತು ಹರಿಯಾಣ, ಕೇರಳ, ಮಧ್ಯಪ್ರದೇಶ, ಮೇಘಾಲಯ, ನಾಗಾಲ್ಯಾಂಡ್‌, ಒಡಿಶಾ, ಪಂಜಾಬ್, ಸಿಕ್ಕಿಂ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ಈವರೆಗೆ ಒಟ್ಟು 5,26,649 ಜನರು ಸಾವಿಗೀಡಾಗಿದ್ದು, ಈ ಪೈರಿ ಮಹಾರಾಷ್ಟ್ರದವ್ವಿ 1,48,129, ಕೇರಳದಲ್ಲಿ 70,548, ಕರ್ನಾಟಕದಲ್ಲಿ 40,155, ತಮಿಳುನಾಡಿನಲ್ಲಿ 38,033, ದೆಹಲಿಯಲ್ಲಿ 26,327, ಉತ್ತರ ಪ್ರದೇಶದಲ್ಲಿ 23,574 ಮತ್ತು ಪಶ್ಚಿಮ ಬಂಗಾಳದಿಂದ 21,389 ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT