ಪಿ.ಚಿದಂಬರಂ 
ದೇಶ

ಸಂಸತ್ತು 'ನಿಷ್ಕ್ರಿಯ'ವಾಗಿದ್ದು, ಪ್ರಜಾಪ್ರಭುತ್ವ ಉಸಿರಾಡಲು ಕಷ್ಟಪಡುತ್ತಿದೆ: ಪಿ ಚಿದಂಬರಂ

ಸಂಸತ್ತಿನ ಕಾರ್ಯಚಟುವಟಿಕೆಯು ನಿಷ್ಕ್ರಿಯವಾಗಿದೆ ಎಂಬ ತೀರ್ಮಾನಕ್ಕೆ ನಾನು ಬಂದಿರುವೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವವು ಉಸಿರಾಡಲು ಕಷ್ಟಪಡುತ್ತಿದೆ. ಬಹುತೇಕ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ...

ನವದೆಹಲಿ: ಸಂಸತ್ತಿನ ಕಾರ್ಯಚಟುವಟಿಕೆಯು ನಿಷ್ಕ್ರಿಯವಾಗಿದೆ ಎಂಬ ತೀರ್ಮಾನಕ್ಕೆ ನಾನು ಬಂದಿರುವೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವವು ಉಸಿರಾಡಲು ಕಷ್ಟಪಡುತ್ತಿದೆ. ಬಹುತೇಕ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಭಾನುವಾರ ಹೇಳಿದ್ದಾರೆ.

ಕಳೆದ ವಾರ ಅಧಿವೇಶನದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದಿಂದ ಸಮನ್ಸ್ ಪಡೆದಿದ್ದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಕ್ಷಿಸಲು ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರು "ವಿಫಲರಾಗಿದ್ದಾರೆ" ಎಂದು ಚಿದಂಬರಂ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಬೆಲೆ ಏರಿಕೆ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆಯನ್ನು ರಾಮ ಮಂದಿರ ಪ್ರತಿಷ್ಠಾಪನಾ ದಿನಕ್ಕೆ ಲಿಂಕ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟೀಕೆಯನ್ನು  ಸ್ಪಷ್ಟವಾಗಿ ತಳ್ಳಿಹಾಕಿದ ಚಿದಂಬರಂ, 'ಶಿಲಾನ್ಯಾಸ'ದ ವಾರ್ಷಿಕೋತ್ಸವ ದಿನಾಂಕ "ನಮ್ಮ ಮನಸ್ಸಿನಲ್ಲೇ ಇರಲಿಲ್ಲ" ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಗೆ ಶನಿವಾರ ಮತದಾನ ನಡೆಯುವುದರಿಂದ ಎಲ್ಲ ಸಂಸದರು ಶುಕ್ರವಾರ ದೆಹಲಿಯಲ್ಲಿರುತ್ತಾರೆ ಎಂದು ಗಣನೆಗೆ ತೆಗೆದುಕೊಂಡು ಅಂದು ಪ್ರತಿಭಟನೆ ನಿಗದಿಪಡಿಸಲಾಗಿದೆ ಎಂದು ಚಿದಂಬರಂ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!